ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ನಿರೀಕ್ಷೆ

ಡಿ.ಎಸ್.ಹೂಲಗೇರಿ
ಡಿ.ಎಸ್.ಹೂಲಗೇರಿ
Published on
ಲಿಂಗಸುಗೂರು: ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಎರಡನೇ ಅವಧಿಗೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಸಂದರ್ಭದಲ್ಲಿ ನನಗೆ ಅವಕಾಶ ಸಿಗಬಹುದೆಂಬ ನಿರೀಕ್ಷೆ ಹೊಂದಿದ್ದೇನೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು, ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ನಿರ್ಧರಿಸಿ ಎರಡನೇ ಅವಧಿಗೆ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಾಗ ನನಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಕೊಟ್ಟರೂ ಸಂತೋಷ, ಕೊಡದಿದ್ದರೂ ಖುಷಿ ಎಂದರು. 
ಮೇ 10 ರಂದು ಮುದಗಲ್‌ನಲ್ಲಿ ನಡೆದ ನನ್ನ ಮಗಳ ಮದುವೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿಕೆ ಶಿವಕುಮಾರ, ಸಚಿವರಾದ ಸತೀಶ ಜಾರಕಿಹೊಳಿ, ಶಿವರಾಜ ತಂಗಡಗಿ, ಎನ್.ಎಸ್.ಬೋಸರಾಜು ಹಾಗೂ ಮಾಜಿ ಸಚಿವ ಅಮರೇಗೌಡ ಬಯ್ಯಪುರ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಸೇರಿ ಎಲ್ಲ ನಾಯಕರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರತ್ಯಕ್ಷ-ಪರೋಕ್ಷವಾಗಿ ಬಂದು ಮದುವೆ ಸಮಾರಂಭ ಯಶಸ್ವಿಗೊಳಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು. 
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಮಹ್ಮದರಫಿ, ಸಂತೋಷ ಸೊಪ್ಪಿಮಠ, ಎಸ್.ಆರ್.ರಸೂಲ್, ದಾವೂದ್ ಮುದಗಲ್, ಸಂಜೀವಪ್ಪ ಹುನಕುಂಟಿ, ತಮ್ಮಣ್ಣ ಗುತ್ತೇದಾರ, ಉಮೇಶ ಐಹೊಳೆ ಇದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net