ಆರ್ಥಿಕ ಶಿಸ್ತಿಗೆ ಆದ್ಯತೆ ನೀಡಲಿ

ಸಿಂಧನೂರಿನ ಕನಕದಾಸ ಕಲ್ಯಾಣ ಮಂಟಪದಲ್ಲಿ ರಾಯಚೂರು ಜಿಲ್ಲೆಯ ಸೌಹಾರ್ದ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಂಪರ್ಕ ಸಭೆಯನ್ನು ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ರಾಜ್ಯ ಘಟಕದ ಅಧ್ಯಕ್ಷ ಜಿ.ನಂಜನಗೌಡ ಉದ್ಘಾಟಿಸಿದರು. ಪ್ರಾಂತೀಯ ವ್ಯವಸ್ಥಾಪಕ ಸಂಜಯ್ ಕೊರಟಕರ, ನಿರ್ದೇಶಕ ಆರ್.ತಿಮ್ಮಯ್ಯ ಶೆಟ್ಟಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸೌಸಂಸ ನಿಯಮಿತ ರಾಜ್ಯಾಧ್ಯಕ್ಷ ಜಿ.ನಂಜನಗೌಡ ಸಲಹೆ
  • ಸಿಂಧನೂರು ಸಂಪರ್ಕ ಸಭೆ
ಸಿಂಧನೂರು: ಸಂಘಗಳ ಆರ್ಥಿಕ ಶಿಸ್ತು, ಉತ್ತಮ ಆಡಳಿತ ಮತ್ತು ಸದಸ್ಯ ಕೇಂದ್ರಿತ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಸಹಕಾರ ಕ್ಷೇತ್ರ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ರಾಜ್ಯ ಘಟಕದ ಅಧ್ಯಕ್ಷ ಜಿ.ನಂಜನಗೌಡ ಹೇಳಿದರು.
ಕನಕದಾಸ ಕಲ್ಯಾಣ ಮಂಟಪದಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ಕಲಬುರಗಿ ಪ್ರಾಂತದಿಂದ ಹಮ್ಮಿಕೊಂಡಿದ್ದ ರಾಯಚೂರು ಜಿಲ್ಲೆಯ ಸೌಹಾರ್ದ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು.
ಸಂಘಗಳು ಸದಸ್ಯರ ವಿಶ್ವಾಸದ ಜತೆಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಆಡಳಿತ ನೀಡಬೇಕು. ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಸಂಘದ ಅಭಿವೃದ್ಧಿಗೆ ದೂರದೃಷ್ಟಿಯೊಂದಿಗೆ ಕಾರ್ಯನಿರ್ವಹಿಸಿ, ಗುಣಮಟ್ಟದ ಸೇವೆ ಒದಗಿಸಿ ಸಹಕಾರ ಚಳವಳಿಯನ್ನು ಇನ್ನಷ್ಟು ವಿಸ್ತರಿಸಬೇಕು.ಹೊಸ ತಂತ್ರಜ್ಞಾನ ಅಳವಡಿಕೆ, ಸಿಬ್ಬಂದಿ ಕಾರ್ಯಕ್ಷಮತೆ ಹಾಗೂ ಸದಸ್ಯರೊಂದಿಗೆ ನಿರಂತರ ಸಂಪರ್ಕ ಅಗತ್ಯವಾಗಿದೆ ಎಂದರು.
ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಎಂ.ದೊಡ್ಡಬಸವರಾಜ ಮಾತನಾಡಿ, ಜಿಲ್ಲೆಯ ಸೌಹಾರ್ದ ಸಹಕಾರ ಸಂಘಗಳು ಪರಸ್ಪರ ಸಹಕಾರ, ಸಮನ್ವಯ ಹಾಗೂ ಸದಸ್ಯರ ವಿಶ್ವಾಸದ ಆಧಾರದ ಮೇಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಹಕಾರ ಸಂಘಗಳ ಆಡಳಿತ ಮಂಡಳಿಯವರು ಕಾನೂನುಬದ್ಧ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುವ ಮೂಲಕ ಸದಸ್ಯರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದರು.
ಪ್ರಾಂತೀಯ ವ್ಯವಸ್ಥಾಪಕ ಸಂಜಯ್ ಕೊರಟಕರ ಮಾತನಾಡಿದರು. ಸಂಸ್ಥೆಯ ನಿರ್ದೇಶಕ ಆರ್.ತಿಮ್ಮಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಒಕ್ಕೂಟದ ಸದಸ್ಯರಾದ ರಾಜಶೇಖರ ಬಿ., ಎಚ್.ಜಿ.ಹನುಮಂತಯ್ಯ ಶೆಟ್ಟಿ, ಮಂಜುಳಾ ಪಾಟೀಲ್, ಪುಷ್ಪಾ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಟರಾಜ, ಹುಸೇನಬಾಷಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net