ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ

ರಾಯಚೂರಿನ ಜಿಲ್ಲಾ ಪಂಚಾಯಿತಿ ಜಲ ನಿರ್ಮಲ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ  ಪಾಮಯ್ಯ ಮುರಾರಿ ಅಧ್ಯಕ್ಷತೆಯಲ್ಲಿ  ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಾಲೂಕು ಅಧ್ಯಕ್ಷ ಪವನ್ ಕಿಶೋರ ಪಾಟೀಲ್ , ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಪ್ರಾಧಿಕಾರದ ಜಿಲ್ಲಾ ಮಟ್ಟದ ಉಪಾಧ್ಯಕ್ಷ ನಾಗೇಂದ್ರ ಮಟಮಾರಿ, ಗಫೂರ ಸಾಬ್, ಹನುಮಂತಪ್ಪ ಜಾಲಿಬೆಂಚಿ, ಶೇಖರ ಗೌಡ ತುರ್ವಿಹಾಳ, ಸದಸ್ಯರಾದ ಬಿ,ಕೆ.ಅಮರೇಶ, ಲಕ್ಷ್ಮಣ ಜ್ಯೋತಿ, ಮಹೆಬೂಬ್ ಸಾಬ್, ಅನಿಲ ಕುಮಾರ್ ಇದ್ದರು.
ರಾಯಚೂರಿನ ಜಿಲ್ಲಾ ಪಂಚಾಯಿತಿ ಜಲ ನಿರ್ಮಲ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಾಲೂಕು ಅಧ್ಯಕ್ಷ ಪವನ್ ಕಿಶೋರ ಪಾಟೀಲ್ , ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಪ್ರಾಧಿಕಾರದ ಜಿಲ್ಲಾ ಮಟ್ಟದ ಉಪಾಧ್ಯಕ್ಷ ನಾಗೇಂದ್ರ ಮಟಮಾರಿ, ಗಫೂರ ಸಾಬ್, ಹನುಮಂತಪ್ಪ ಜಾಲಿಬೆಂಚಿ, ಶೇಖರ ಗೌಡ ತುರ್ವಿಹಾಳ, ಸದಸ್ಯರಾದ ಬಿ,ಕೆ.ಅಮರೇಶ, ಲಕ್ಷ್ಮಣ ಜ್ಯೋತಿ, ಮಹೆಬೂಬ್ ಸಾಬ್, ಅನಿಲ ಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ
  • ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ಮನವಿ
ರಾಯಚೂರು
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪ್ರಾಮಾಣಿಕತೆಯಿಂದ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಜಲ ನಿರ್ಮಲ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಮನೆ ಯಜಮಾನರಿಗೆ ಪ್ರತಿ ತಿಂಗಳು ಕಡ್ಡಾಯವಾಗಿ ಹಣ ಜಮೆಯಾಗುವಂತೆ ಸಂಬಅಧಿಸಿದ ಅಧಿಕಾರಿಗಳು ಜಾಗೃತಿ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೂ 29 ಕಂತಿನ ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡಲಾಗಿದೆ. ಈ ಯೋಜನೆಯಡಿ ಗೊಂದಲಕ್ಕೆ ಅವಕಾಶ ನೀಡಬಾರದು.
ಜಿಲ್ಲೆಯಲ್ಲಿ ಒಟ್ಟು ನೋಂದಣಿಯಾದವರು ಮತ್ತು ಅನರ್ಹ ಫಲಾನುಭವಿಗಳ ಎಷ್ಟು ಖಾತೆಗಳ ಬಂದ್ ಮಾಡಲಾಗಿದೆ. ಎಂಬ ಮಾಹಿತಿಯನ್ನು ಸರಿಯಾಗಿ ನೀಡಬೇಕು.
ಯೋಜನೆಯ ಫಲಾನುಭವಿಗಳು ಮರಣ ಹೊಂದಿದ್ದಲ್ಲಿ ನಾಡ ಕಾರ್ಯಾಲಯದಿಂದ ನೀಡಿದ ಮರಣ ಪ್ರಮಾಣ ಪತ್ರವನ್ನು ಮೂಲ ದಾಖಲಾತಿಯಾಗಿ ಪರಿಗಣಿಸಬೇಕು. ಅಲ್ಲದೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮೃತಪಟ್ಟ ಫಲಾನುಭವಿಗಳ ಹೆಸರು ಖಾತರಿಪಡಿಸಿಕೊಳ್ಳಬೇಕು. ಗ್ಯಾರಂಟಿ ಯೋಜನೆಗಳ ಕುರಿತು ಸಭೆಗೆ ಸರಿಯಾದ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಕೋಟ್ಯಾಂತರ ರೂಪಾಯಿಗಳನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯನ್ನು ಪರಿಷ್ಕರಣೆ ಮಾಡಲಾಗುತ್ತಿದೆ.
ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ. ಅಲ್ಲದೆ ಸಾರ್ವಜನಿಕರ ಸ್ಥಳಗಳು ಸೇರಿದಂತೆ ಕಚೇರಿಗಳಲ್ಲಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಬಗ್ಗೆ ನಾಮ ಫಲಕಗಳನ್ನು ಅಳವಡಿಸಬೇಕು. ಇದರಿಂದ ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆ ಬಗ್ಗೆ ಮಾಹಿತಿ ಪಡೆಯಲು ಸಹಕಾರಿಯಾಗಲಿದೆ ಎಂದರು.

ಸಮಿತಿಯ ತಾಲೂಕು ಅಧ್ಯಕ್ಷ ಪವನ್ ಕಿಶೋರ ಪಾಟೀಲ್ ಮಾತನಾಡಿ, ತಾಲೂಕಿನ ಗ್ರಾಮೀಣ ಭಾಗದ ಮೂವರು ಬದುಕಿರುವ ಮಹಿಳೆಯರನ್ನು ಮೃತಪಟ್ಟಿದ್ದಾರೆ ಎಂದು ಯೋಜನೆಯಡಿ ಹೇಳಲಾಗುತ್ತದೆ.
ಸಂಬಂಧಿಸಿದ ಅಧಿಕಾರಿಗಳು ಸರಿಯಾಗಿ ಪರಿಶೀಲನೆ ಮಾಡಬೇಕು. ಬದುಕಿರುವವರನ್ನು ಸತ್ತಿದ್ದಾರೆ ಎಂದು ತೋರಿಸಲಾಗುತ್ತಿರುವ ಕಾರಣ ಯೋಜನೆಯಡಿ ಗೊಂದಲಕ್ಕೆ ದಾರಿ ಮಾಡಿಕೊಡಲಾಗುತ್ತಿದೆ. ಅರ್ಹರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಶ್ರಮಿಸಬೇಕು.
ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲೆಯ ಪ್ರತಿಯೊಂದು ತಾಲೂಕು ಪಂಚಾಯತಿಗಳಲ್ಲಿ ಸಹಾಯವಾಣಿ ಪ್ರಾರಂಭಿಸಬೇಕು. ಅಲ್ಲದೆ ಗ್ರಾಮೀಣ ಭಾಗದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಪ್ರಾಧಿಕಾರದ ಜಿಲ್ಲಾ ಮಟ್ಟದ ಉಪಾಧ್ಯಕ್ಷ ನಾಗೇಂದ್ರ ಮಟಮಾರಿ, ಗಫೂರ ಸಾಬ್, ಹನುಮಂತಪ್ಪ ಜಾಲಿಬೆಂಚಿ, ಶೇಖರ ಗೌಡ ತುರ್ವಿಹಾಳ, ಸದಸ್ಯರಾದ ಬಿ,ಕೆ.ಅಮರೇಶ, ಲಕ್ಷ್ಮಣ ಜ್ಯೋತಿ, ಮಹೆಬೂಬ್ ಸಾಬ್, ಅನಿಲ ಕುಮಾರ್, ವೆಂಕಟೇಶ, ಆದನಗೌಡ, ಜಾಫರ್ ಪಟೇಲ್ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net