ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ಮೇ 30 ರಂದು ಪ್ರತಿಭಟನೆ

ಶರಣಬಸವ
ಶರಣಬಸವ
Published on
ರಾಯಚೂರು
ಎಸ್‌ಐಆರ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಪ್ರಕ್ರಿಯೆ ವಿರೋಧಿಸಿ ಮೇ 30 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವದಾಗಿ ಎಸ್‌ಐಆರ್ ವಿರೋಧಿ ಒಕ್ಕೂಟ ಸಂಚಾಲಕ ಶರಣಕುಮಾರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿಬ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಮತದಾರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರನ್ನು ಕಡಿತಗೊಳಿಸುವ ಪ್ರಕ್ರಿಯೆ ನಡೆಸುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈಗಾಗಲೇ ಕೈಗೊಂಡಿರುವ ಎಸ್ ಐಆರ್‌ನಿಂದ ಲಕ್ಷಾಂತರ ಜನರು ಮತದಾನ ಹಕ್ಕು ಕಳೆದುಕೊಂಡಿದ್ದಾರೆ.
ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭಿ ಸಿದ್ದು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಅಂದು ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ಗಾರ್ಡನವರೆಗೆ ಪ್ರತಿಭಟನಾ ರ‌್ಯಾಲಿ ನಡೆಯಲಿದ್ದು, ರಾಜಕೀಯ ದುರುದ್ದೇಶದಿಂದ ನಡೆಯುತ್ತಿರುವ ಎಸ್‌ಐಆರ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಬೆಂಬಲಿಸಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಚಾಮರಸ ಮಾಲಿಪಾಟೀಲ್. ಮಾರೆಪ್ಪ ಹರವಿ, ಡಿ.ಎಚ್.ಪೂಜಾರ, ಬಸವರಾಜ ಯರದಿಹಾಳ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net