ಸಿಎಂ ಸಿದ್ದರಾಮಯ್ಯ ರಾಜೀನಾಮೆ ಖಂಡಿಸಿ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ದೇಶ ಪೂರ್ವಕವಾಗಿ ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ಪಡೆದು ಕೊಳ್ಳುತ್ತಿದ್ದಾರೆಂದು ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ  ಪ್ರತಿಭಟನೆ ಮಾಡಿದರು.  ಪ್ರಮುಖರಾದ ಕೊಂಡಪ್ಪ, ಬಸವಂತಪ್ಪ, ನಾಗೇಂದ್ರಪ್ಪ ಮಟಮಾರಿ, ಈಶಪ್ಪ, ಹನುಮಂತಪ್ಪ ಜಾಲಿಬೆಂಚಿ, ಸಂಗಮೇಶ ಭಂಡಾರಿ, ನಾಗರಾಜ, ಜಯರಾಜ್, ಶ್ರೀನಿವಾಸ, ಬಾಭು, ಶಂಕರ್, ರಾಮನಗೌಡ, ರಂಚಿತ್, ರಂಗಾರೆಡ್ಡಿ, ಶೇಖರ್ ವಾರದ್, ನರಸಿಂಹಲು, ಮಲ್ಲಿಕಾರ್ಜುನ ಜಕ್ಕಲದಿನ್ನಿ ಇದ್ದರು.

Published on
ರಾಯಚೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ದೇಶ ಪೂರ್ವಕವಾಗಿ ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ಪಡೆದು ಕೊಳ್ಳುತ್ತಿದ್ದಾರೆಂದು ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿ ಸತತವಾಗಿ ಪಕ್ಷ ಸಂಘಟನೆ ಮತ್ತು ಅಧಿಕಾರವಧಿಯಲ್ಲಿ ಉತ್ತಮ ಆಡಳಿತವನ್ನು ನೀಡುತ್ತಾ ಬಂದಿದ್ದಾರೆ. ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಹಿಂದುಳಿದ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯ ಅವರು ಎಲ್ಲಾ ಸಮುದಾಯಗಳಿಗೆ ನ್ಯಾಯಯುತವಾದ ಸೌಲಭ್ಯಗಳನ್ನು ನೀಡುತ್ತಾ ಬಂದಿದ್ದಾರೆ. ಆದರೆ ಇದೀಗ ಕಾಂಗ್ರೆಸ್ ಪಕ್ಷವು ಉದ್ದೇಶ ಪೂರ್ವಕವಾಗಿ ಸಿದ್ದರಾಮಯ್ಯ ಅವರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಪಡೆದುಕೊಳ್ಳುತ್ತಿದ್ದು, ಇದೂ ಒಂದು ಸಮುದಾಯ ಮಾತ್ರವಲ್ಲದೇ ಇಡೀ ಹಿಂದುಳಿದ ಜನಾಂಗಕ್ಕೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸ್ಥಿರವಾಗಿ ಮತ್ತು ನಿರಂತರ ಅಸ್ತಿತ್ವದಲ್ಲಿರಲು ಸಿದ್ದರಾಮಯ್ಯ ಅವರ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಕೂಡಲೇ ಸಿದ್ದರಾಮಯ್ಯ ಅವರನ್ನೇ ಮುಂದಿನ 2 ವರ್ಷಗಳ ಕಾಲ ಮುಖ್ಯಮಂತ್ರಿಯನ್ನಾಗಿ ನೋಡುವುದು ಇಡೀ ರಾಜ್ಯದ ಜನರ ಆಶಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕೊಂಡಪ್ಪ, ಬಸವಂತಪ್ಪ, ನಾಗೇಂದ್ರಪ್ಪ ಮಟಮಾರಿ, ಈಶಪ್ಪ, ಹನುಮಂತಪ್ಪ ಜಾಲಿಬೆಂಚಿ, ಸಂಗಮೇಶ ಭಂಡಾರಿ, ನಾಗರಾಜ, ಜಯರಾಜ್, ಶ್ರೀನಿವಾಸ, ಬಾಭು, ಶಂಕರ್, ರಾಮನಗೌಡ, ರಂಚಿತ್, ರಂಗಾರೆಡ್ಡಿ, ಶೇಖರ್ ವಾರದ್, ನರಸಿಂಹಲು, ಮಲ್ಲಿಕಾರ್ಜುನ ಜಕ್ಕಲದಿನ್ನಿ, ಮಲ್ಲಿಕಾರ್ಜುನ ಏಗನೂರು, ಯಂಕನಗೌಡ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net