ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.30 ರಂದು ಈಗಾಗಲೇ ಏಳು ಜಿಲ್ಲೆಗಳ ಪದಾಧಿಕಾರಿಗಳ ಪ್ರಥಮ ಸಭೆ ನಡೆದಿದ್ದು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೋರಾಟದ ರೂಪುರೇಷೆ ಸಿದ ್ಧಪಡಿಸಲಾಗಿದೆ. ರಾಘವೇಂದ್ರ ಕುಷ್ಟಗಿ, ಬಸವರಾಜ್, ಲೀಲಾ ಸೇರಿದಂತೆ ಹಲವು ಮುಖಂಡರು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದು, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿನ ಸಮಸ್ಯೆಗಳ ಕುರಿತು ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. 371(ಜೆ) ವಿಶೇಷ ಸ್ಥಾನಮಾನದ ಕುರಿತು ಇನ್ನೂ ಅನೇಕ ಜನರಿಗೆ ಸಮರ್ಪಕ ಮಾಹಿತಿ ಇಲ್ಲ. ಈ ಹಿನ್ನಲೆಯಲ್ಲಿ ಆಗಸ್ಟ್ 8 ಮತ್ತು 9ರಂದು ತಾವರಗೇರಿಯ ಬೌದ ್ಧ ವಿಹಾರದಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದ್ದು, ಒಂದು ತಿಂಗಳೊಳಗೆ ಎಲ್ಲಾ ಜಿಲ್ಲೆಗಳ ಸಮಿತಿಗಳನ್ನು ರಚಿಸಿ ಪ್ರದೇಶದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.