ಆ.14 ರಂದು ಆರೋಗ್ಯ ಇಲಾಖೆ ಮುಂದೆ ಪ್ರತಿಭಟನೆ

k.adivesh
k.adivesh
Published on
ರಾಯಚೂರು ಆರೋಗ್ಯ ಇಲಾಖೆಯ ಸಿ ಮತ್ತು ಡಿ ಗ್ರೂಪ್ ನೌಕರರ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಟಿಯುಸಿಐ ನೇತೃತ್ವದಲ್ಲಿ ಆ.14 ರಂದು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆಂದು ಟಿಯುಸಿಐ ಜಿಲ್ಲಾಧ್ಯಕ್ಷ ಕೆ.ಅಡವಿರಾವ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಕಾರ್ಮಿಕ ಕನಿಷ್ಟ ವೇತನ ಪರಿಷ್ಕರಿಸಿ ಆದೇಶಿಸಲಾಗಿದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವುಕುಮಾರ ನೇತೃತ್ವದ ಸರ್ಕಾರ ಪರಿಷ್ಕೃತ ಕನಿಷ್ಟ ವೇತನ ಕಾಯ್ದೆ ತಡೆ ಹಿಡಿದಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವೇತನ ಪಾವತಿಸದೇ ಬಾಕಿ ಉಳಿಸಿಕೊಳ್ಳಲಾಗಿದೆ.
ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿರುವ ಸರ್ಕಾರಹೊರಗುತ್ತಿಗೆ ನೌಕರರ 10 ವರ್ಷ ಸೇವೆ ಸಲಿಸಿದರನ್ನು ಪರಿಗಣಿಸಿ ಖಾಯಂಗೊಳಿಸಬೇಕು. ಸಂವಿಧಾನ ಉಳಿಸುವದಾಗಿ ಹೇಳುವ ಕಾಂಗ್ರೆಸ್ ಸರ್ಕಾರ ಹೊರಗುತ್ತಿಗೆ ನೌಕರರಿಗೆ ಸಂವಿಧಾನ ಬದ್ಧತೆ ಹಕ್ಕುಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಶಂಕ್ರಪ್ಪ ಗುಂಡಸಾಗರ, ಆಂಜಿನೇಯ ಭಂಡಾರಿ, ದ್ಯಾಮಣ್ಣ ಶರಣಪ್ಪ, ಜಗದೀಶ, ನಾಗರಾಜ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net