ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೂ.16 ರಂದು ಪ್ರತಿಭಟನೆ

ಚಾಮರಸ ಮಾಲೀ ಪಾಟೀಲ್
ಚಾಮರಸ ಮಾಲೀ ಪಾಟೀಲ್
Published on

ರಾಯಚೂರು

ಜಿಲ್ಲೆಯಲ್ಲಿ ರೈತರಿಂದ ಖರೀದಿ ಮಾಡಿದ ಜೋಳದ ಹಣ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಜೂ.16 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುತ್ತದೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರಾವಾಧ್ಯಕ್ಷ ಚಾಮರಸ ಮಾಲೀ ಪಾಟಿಲ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಖರೀದಿ ಕೇಂದ್ರಗಳ ಮೂಲಕ ಜೋಳ ಮಾರಾಟ ಮಾಡಿದ ಶೇ.85 ರಷ್ಟು ಜನರಿಗೆ ಸರ್ಕಾರದಿಂದ ಹಣ ಬಂದಿಲ್ಲ. ಇದರಿಂದ ರೈತರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಇಗಾಗಲೇ ಮುಂಗಾರು ಬಿತ ್ತನೆ ಕಾರ್ಯ ಆರಂಭವಾಗಿದ್ದು, ರೈತರಿಗೆ ಗೊಬ್ಬರ, ಬೀಜ, ಡೀಸೆಲ್ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಹಣದ ಅಗತ್ಯವಿದೆ. ಅನೇಕ ರೈತರು ಸಾಲ ಮಾಡಿ ಕೃಷಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳಿಗೆ 15 ದಿನಗಳ ಹಿಂದೆಯೇ ಈ ವಿಷಯವನ್ನು ತಿಳಿಸಲಾಗಿದ್ದು, ಒಂದು ವಾರದಲ್ಲಿ ಹಣ ಬಿಡುಗಡೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಬಾರಿ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ತೀವ್ರವಾಗಿದ್ದು, ನೀರಾವರಿ ಚಟುವಟಿಕೆಗಳು ಆರಂಭವಾದ ನಂತರ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರೈತರಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡಬೇಕು. ರಸಗೊಬ್ಬರ ಖರೀದಿಯೊಂದಿಗೆ ಕಡ್ಡಾಯವಾಗಿ ಜಿಂಕ್ ಹಾಗೂ ಇತರ ಉತ್ಪನ್ನಗಳನ್ನು ನೀಡುವ ಅಕ್ರಮ ಪದ್ಧತಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಲಿಂಗಾರೆಡ್ಡಿ, ಸಿದ್ದಯ್ಯ ಸ್ವಾಮಿ, ಬಸವರಾಜ ಮಾಲಿಪಾಟೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net