ಜನರಿಗೆ ತುರ್ತು ಆರೋಗ್ಯ ಸೇವೆ ಒದಗಿಸಿ

ದೇವದುರ್ಗ ತಾಲೂಕು ಮಸರಕಲ್ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕಿ ಕರೆಮ್ಮ ಜಿ.ನಾಯಕ ಭೇಟಿನೀಡಿ ದಾಖಲೆ ಪರಿಶೀಲನೆ ನಡೆಸಿದರು.
ದೇವದುರ್ಗ ತಾಲೂಕು ಮಸರಕಲ್ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕಿ ಕರೆಮ್ಮ ಜಿ.ನಾಯಕ ಭೇಟಿನೀಡಿ ದಾಖಲೆ ಪರಿಶೀಲನೆ ನಡೆಸಿದರು.
Published on
ದೇವದುರ್ಗ: ಸಾರ್ವಜನಿಕ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗಿಗಳು ಯಾವುದೇ ಸಂದರ್ಭದಲ್ಲಿ ಬಂದರೂ ತುರ್ತು ಆರೋಗ್ಯ ಸೇವೆ ಒಗಿಸಬೇಕು. ಲೋಪಗಳು ಕಂಡುಬಂದರೆ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕಿ ಕರೆಮ್ಮ ಜಿ.ನಾಯಕ ತಾಕೀತು ಮಾಡಿದರು.
ತಾಲೂಕಿನ ಮಸರಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿನೀಡಿ ಪರಿಸ್ಥಿತಿ ಅವಲೋಕಿಸಿದರು. ಇಲ್ಲಿನ ವ್ಯವಸ್ಥೆ ಕುರಿತು ಜನರು ನನಗೆ ವಿಡಿಯೋ ಮಾಡಿ ಹಾಕುತ್ತಾರೆ. ಮೊನ್ನೆ ತುರ್ತು ಸಂದರ್ಭದಲ್ಲಿ ರೋಗಿಗಳು ಕೇಂದ್ರಕ್ಕೆ ಬಂದಾಗ ಯಾವುದೇ ಸಿಬ್ಬಂದಿ ಕರ್ತವ್ಯದಲ್ಲಿ ಇರಲಿಲ್ಲ. ರೋಗಿಗಳಿಗೆ ಹೆಚ್ಚು ಕಡಿಮೆಯಾದರೆ ಯಾರು ಜವಾಬ್ದಾರರು ಎಂದು ಪ್ರಶ್ನಿಸಿದ ಶಾಸಕಿ, ಮುಂದಿನ ದಿನಗಳಲ್ಲಿ ಈತರಹ ಆಗದಂತೆ ಎಚ್ಚರಿಕೆವಹಿಸಬೇಕು. ವೈದ್ಯರು ಇಲ್ಲದಿದ್ದ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗೆ ಸಿಬ್ಬಂದಿಯನ್ನು ಕಡ್ಡಾಯವಾಗಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net