ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡಲಿ

ARCHANA SUNKARI
ARCHANA SUNKARI
Published on
ರಾಯಚೂರು ನಗರದ ವಿವಿಧ ವಿದ್ಯಾರ್ಥಿ ವಸತಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ನಿಲಯಗಳಿಗೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಛಲವಾದಿ ಮಹಾಸಭಾದ ಮಹಿಳಾ ಜಿಲ್ಲಾಧ್ಯಕ್ಷ ಅರ್ಚನಾ ಸುಂಕಾರಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಬೇಕಾದ ಆಹಾರವನ್ನು ಕದ್ದು ಮನೆಗೆ ತೆಗೆದುಕೊಂಡು ಹೋಗುತ್ತಿರುವುದು ಅಸ್ವಚ್ಚತೆ, ಸರ್ಕಾರ ನೀಡುವ ಸೌಲಭ್ಯಗಳನ್ನು ನೀಡದೇ ಇರುವ ಕುರಿತು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಅನೇಕ ವಸತಿ ನಿಲಯಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯಗಳು ಇಲ್ಲ. ವಿದ್ಯಾರ್ಥಿಗಳು ಮೇಲ್ವಿಚಾರಕ ಗಮನಕ್ಕೆ ತಂದರೂ ಯಾರು ಸ್ಪಂದಿಸುತ್ತಿಲ್ಲ. ಕೂಡಲೇ ಪರಿಶೀಲನೆ ನಡೆಸಿ ಜವಬ್ದಾರಿಯುತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ವಿದ್ಯಾರ್ಥಿಗಳೊಂದಿಗೆ ಹೋರಾಟ ನಡೆಸುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಮೀನಾಕ್ಷಿ, ಲಕ್ಷ್ಮೀ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net