ಕುಡಿವ ನೀರಿನ ಯೋಜನೆಗೆ ಅನುದಾನ ನೀಡಿ

 ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಮಾಜಿ ಸಚಿವ ಅಮರೇ ಗೌಡ ಪಾಟೀಲ್ ಬಯ್ಯಪುರ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಅವರು ಮುದಗಲ್ ಶಾಶ್ವತ ಕುಡಿವ ನೀರಿನ ಯೋಜನೆಗೆ ಅನುದಾನ ನೀಡುವಂತೆ ಕೋರಿದರು.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಮಾಜಿ ಸಚಿವ ಅಮರೇ ಗೌಡ ಪಾಟೀಲ್ ಬಯ್ಯಪುರ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಅವರು ಮುದಗಲ್ ಶಾಶ್ವತ ಕುಡಿವ ನೀರಿನ ಯೋಜನೆಗೆ ಅನುದಾನ ನೀಡುವಂತೆ ಕೋರಿದರು.
Published on
ಮುದಗಲ್: ಪಟ್ಟಣದಲ್ಲಿ ಅರ್ಧಕ್ಕೆ ನಿಂತ ಶಾಶ್ವತ ಕುಡಿವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ ಪೂರ್ಣಗೊಳಿಸಬೇಕೆಂದು ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಪುರ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಅವರು ಸೋಮವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮುದಗಲ್ ಪಟ್ಟಣಕ್ಕೆ 2017ರಲ್ಲಿ 27.68 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಕಾಮಗಾರಿ ಕೈಗೆತ್ತಿಕೊಂಡು ಗುತ್ತಿಗೆದಾರರ ಅರೆಬರೆ ಕಾಮಗಾರಿ ಮಾಡಿದ್ದಾರೆ. ಯೋಜನೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಟೆಂಡರ್ ರದ್ದುಗೊಳಿಸಿತ್ತು. ಪ್ರಸಕ್ತ ವರ್ಷ ಯೋಜನೆ ಪೂರ್ಣಗೊಳಿಸಲು 45 ಕೋಟಿ ರೂ. ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಿಎಂ ಅವರು, ಎರಡು ಹಂತದಲ್ಲಿ ಅನುದಾನ ಬಿಡುಗಡೆ ಮಾಡಿ ಯೋಜನೆ ಸಾಕಾರಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net