ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಿ

ಸಿಂಧನೂರಿನ ತಹಸಿಲ್ ಕಚೇರಿಯಲ್ಲಿ ಬುಧವಾರ ಸಂಜೆ ಡಿಸಿ ಪೂವಿತಾ ಅವರು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಎಸಿ ಬಸವಣೆಪ್ಪ ಕಲಶೆಟ್ಟಿ, ಪೌರಾಯುಕ್ತ ಪಾಂಡುರಂಗ ಇಟಗಿ, ತಾಪಂ ಇಒ ಚಂದ್ರಶೇಖರ, ಕೃಷಿ ಅಧಿಕಾರಿ ರುದ್ರಗೌಡ ಇದ್ದರು.
ಸಿಂಧನೂರಿನ ತಹಸಿಲ್ ಕಚೇರಿಯಲ್ಲಿ ಬುಧವಾರ ಸಂಜೆ ಡಿಸಿ ಪೂವಿತಾ ಅವರು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಎಸಿ ಬಸವಣೆಪ್ಪ ಕಲಶೆಟ್ಟಿ, ಪೌರಾಯುಕ್ತ ಪಾಂಡುರಂಗ ಇಟಗಿ, ತಾಪಂ ಇಒ ಚಂದ್ರಶೇಖರ, ಕೃಷಿ ಅಧಿಕಾರಿ ರುದ್ರಗೌಡ ಇದ್ದರು.
Published on
ಸಿಂಧನೂರು: ಜಿಲ್ಲಾಧಿಕಾರಿ ಎಸ್. ಪೂವಿತಾ ಅವರು ಬುಧವಾರ ಸಂಜೆ ನಗರಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಚೇರಿಗಳಿಗೆ ತೆರಳಿ ಅಧಿಕಾರಿಗಳಿಗೆ ಶಾಕ್ ನೀಡಿದರು. ಸಮಯಪಾಲನೆ, ಸಮರ್ಪಕ ಸೇವೆ ನೀಡಲು ಖಡಕ್ ಸೂಚನೆ ನೀಡಿದರು. 
ಮೊದಲಿಗೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಸೌಲಭ್ಯ, ಔಷಧಗಳ ಲಭ್ಯತೆ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು. ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕೆಂದು ವೈದ್ಯಾಧಿಕಾರಿ ಸುರೇಶಗೌಡಗೆ ಸೂಚಿಸಿದರು.
ನಂತರ ಇಂದಿರಾ ಕ್ಯಾಂಟೀನ್‌ಗೆ ತೆರಳಿ ಆಹಾರದ ಗುಣಮಟ್ಟ, ಸ್ವಚ್ಛತೆ, ಇತರ ಸೇವೆಗಳನ್ನು ಪರಿಶೀಲಿಸಿ, ಬಡಜನರಿಗೆ ಶುಚಿ-ರುಚಿ ಆಹಾರ ನೀಡಬೇಕೆಂದು ನಿರ್ದೇಶಿಸಿದರು. 
ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ, ರಸಗೊಬ್ಬರ ದಾಸ್ತಾನು ಸ್ಥಿತಿ ಹಾಗೂ ಮಾರಾಟ ವ್ಯವಸ್ಥೆ ಕುರಿತು ಮಾಹಿತಿ ಪಡೆದು, ಯಾವುದೇ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೆ, ತುರ್ವಿಹಾಳ ಕುಡಿವ ಕೆರೆಗೆ ಭೇಟಿ ನೀಡಿ ಕೆರೆಯ ಅಭಿವೃದ್ಧಿ, ನೀರಿನ ಸಂಗ್ರಹ ಹಾಗೂ ನಿರ್ವಹಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. 
ಅಗತ್ಯ ಕ್ರಮಕ್ಕೆ ಸೂಚನೆ: ತಹಸಿಲ್ ಕಚೇರಿಯಲ್ಲಿ ನಗರಸಭೆ, ಕಂದಾಯ ಇಲಾಖೆ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಡಿಸಿ ಪೂವಿತಾ ಅವರು, ವಿವಿಧ ಇಲಾಖೆಗಳ ಪ್ರಗತಿ, ಸಾರ್ವಜನಿಕ ಸಮಸ್ಯೆಗಳು, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. 
ಜನಸಾಮಾನ್ಯರಿಗೆ ಪರಿಣಾಮಕಾರಿ ಹಾಗೂ ಪಾರದರ್ಶಕ ಆಡಳಿತ ಸೇವೆ, ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು. ಲಿಂಗಸುಗೂರು ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ತಾಪಂ ಇಒ ಚಂದ್ರಶೇಖರ, ಕೃಷಿ ಅಧಿಕಾರಿ ರುದ್ರಗೌಡ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net