ಮುದಗಲ್: ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಡಾ.ಅಂಬೇಡ್ಕರ್ ವೃತ್ತಕ್ಕೆ 20 ಲಕ್ಷ ರೂ. ಅನುದಾನ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶುಕ್ರವಾರ ಪುರಸಭೆಯಲ್ಲಿ ಶಾಸಕ ಮಾನಪ್ಪ ವಜ್ಜಲ್‌ಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ವೆಂಕಟರಾಯನ ಪೇಟೆಯಲ್ಲಿರುವ ಡಾ.ಅಂಬೇಡ್ಕರ್ ಭವನ ಶಿಥಿಲಗೊಂಡಿದ್ದು, ಕೂಡಲೇ ಹೊಸ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು.
ದಲಿತರು ವಾಸಿಸುವ ಕೇರಿಗಳಿಗೆ ಮೂಲ ಸೌಕರ್ಯ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.