ಜಾಲಹಳ್ಳಿಯಲ್ಲಿ ಶುಕ್ರವಾರ ಎಸ್‌ಎಫ್‌ಐ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಅಧ್ಯಕ್ಷ ಮಹಾಲಿಂಗ ದೊಡ್ಡಮನಿ, ಕಾರ್ಯದರ್ಶಿ ರಂಗನಾಥ್, ಶಿವರಾಜ, ಬಾಷಾಸಾಬ್, ಸಂತೋಷ್ ತ್ಯಾಪ್ಲಿ, ದಿಲ್‌ಶಾದ್ ಇತರರಿದ್ದರು.
ದೇವದುರ್ಗ, ಜಾಲಹಳ್ಳಿಯಲ್ಲಿ ಎಸ್‌ಎಫ್‌ಐ ಪ್ರತಿಭಟನೆ, ಸರ್ಕಾರಿ ಶಾಲೆಗಳ ವಿಲೀನ,
SFI protests in Devdurga, Jalahalli, merger of government schools,
ದೇವದುರ್ಗ: ವಿದ್ಯಾರ್ಥಿಗಳ ದಾಖಲಾತಿ ಕುಸಿತ ನೆಪದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಪ್ರಾಥಮಿಕ, ಪ್ರೌಢಶಾಲೆಗಳನ್ನು ಸಮೀಪದ ಶಾಲೆಗಳಲ್ಲಿ ವಿಲೀನ ಮಾಡುವುದನ್ನು ವಿರೋಧಿಸಿ ತಾಲೂಕಿನ ಜಾಲಹಳ್ಳಿಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ಪದಾಧಿಕಾರಿಗಳು ಮಾನವ ಸರಪಳಿ ನಿರ್ಮಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಖಾಸಗಿ ಶಾಲಾ, ಕಾಲೇಜುಗಳಿಗೆ ಕಡಿವಾಣ ಹಾಕುವ ಬದಲು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಬಂದ್ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಬದಲು ವಿಲೀನ ಮಾಡಲಾಗುತ್ತಿದೆ. ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಿಸಿದ ಕರ್ನಾಟಕ ಪಬ್ಲಿಕ್ ಶಾಲೆಗೆ ಅಗತ್ಯ ಶಿಕ್ಷಕರು, ಮೂಲಸೌಲಭ್ಯ ಕಲ್ಪಿಸದೆ ಮುಚ್ಚುತ್ತಿರುವುದು ತೀವ್ರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಗತ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ರಾಜ್ಯದಲ್ಲಿ ಖಾಲಿ ಇರುವ 59 ಸಾವಿರ ಶಿಕ್ಷಕರನ್ನು ತಕ್ಷಣವೇ ನೇಮಕ ಮಾಡಿಕೊಳ್ಳಬೇಕು. ಸರ್ಕಾರಿ ಶಾಲೆಗಳಿಗೆ ಹೊಸ ಕಟ್ಟಡ, ಕುಡಿವ ನೀರು, ವಿದ್ಯುತ್ ಸೇರಿ ಮೂಲಸೌಲಭ್ಯ ಕಲ್ಪಿಸಬೇಕು. ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕ, ಸೈಕಲ್ ವಿತರಣೆ ಮಾಡಬೇಕು. ಶಿಕ್ಷಕರಿಗೆ ಅಗತ್ಯ ತರಬೇತಿ, ಮಾರ್ಗದರ್ಶನ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಮಹಾಲಿಂಗ ದೊಡ್ಡಮನಿ, ಕಾರ್ಯದರ್ಶಿ ರಂಗನಾಥ್, ಶಿವರಾಜ, ಬಾಷಾಸಾಬ್, ಸಂತೋಷ್ ತ್ಯಾಪ್ಲಿ, ದಿಲ್‌ಶಾದ್, ರಂಗನಾಥ ಬುಂಕಲದೊಡ್ಡಿ, ಮುಕ್ತಂ ಪಾಷಾ, ಸಂತೋಷ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಇದ್ದರು.