ಜಾಲಹಳ್ಳಿ, ಚಿಂಚೋಡಿ, ಕರಡಿಗುಡ್ಡಿ ಸೇರಿ ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳಿಲ್ಲದೆ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಶುದ್ಧ ಕುಡಿವ ನೀರು, ರಸ್ತೆ, ಚರಂಡಿ ವ್ಯವಸ್ಥೆ, ದಲಿತರು ಸೇರಿ ಬಡವರಿಗೆ ನಿವೇಶನ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸದೆ ನಿರ್ಲಕ್ಷೃವಹಿಸುತ್ತಿದ್ದಾರೆ. ಬಡವರು ಸರ್ಕಾರಿ ಜಮೀನಿನಲ್ಲಿ ವಾಸ ಮಾಡುತ್ತಿದ್ದು ಹಕ್ಕುಪತ್ರ ಇಲ್ಲದೆ ಅಭದ್ರತೆ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.