ದೇವದುರ್ಗ: ಶಿಕ್ಷಕರ ಮೇಲೆ ಮಕ್ಕಳ ಹಾಗೂ ಸಮಾಜದ ಭವಿಷ್ಯ ನಿಂತಿದ್ದು, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮೈಗೂಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ಪಟೇಲ್ ಓಣಿಯ ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ಸರ್ಕಾರಿ ಶಾಲೆಗಳ ಸರ್ವತೋಮುಖ ಬೆಳವಣಿಗೆ ಹಾಗೂ ಮಕ್ಕಳ ಕಲಿಕೆಗೆ ಶಿಕ್ಷಕರ ಇಚ್ಛಾಶಕ್ತಿ ಅವಶ್ಯವಾಗಿದೆ. ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಇಲಾಖೆ ಶ್ರಮಿಸುತ್ತಿದೆ. ಸರ್ಕಾರದ ಯೋಜನೆಗಳನ್ನು ಶಿಕ್ಷಕರು ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಮುಖ್ಯಶಿಕ್ಷಕಿ ಪವಿತ್ರಾ ಯಾಟಗಲ್, ಶಿಕ್ಷಣ ಸಂಯೋಜಕ ಮಹದೇವಪ್ಪ, ಬಿಆರ್‌ಪಿ ಸುರೇಶ, ದಾನಮ್ಮ, ಶಿವಾಜಿ, ಬಾಬು ಹಡಗಲಿ, ಆರ್.ಟಿ.ದಾಸರ್, ಶಿಕ್ಷಕರಾದ ಸವಿತಾ, ನಾಗರತ್ನಾ ಇತರರಿದ್ದರು.