ಗುಣಮಟ್ಟದ ಆರೋಗ್ಯ ಸೇವೆ ನೀಡಿ

ಸಿಂಧನೂರಿನ ತಾಲೂಕು ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡಗೆ ಸಿಪಿಐ (ಎಂಎಲ್) ಲಿಬರೇಷನ್ ಮುಖಂಡರು  ಸೋಮವಾರ ಮನವಿ ಸಲ್ಲಿಸಿದರು. ಕಾರ್ಯದರ್ಶಿ ನಾಗರಾಜ್ ಪೂಜಾರ್, ಸಿಂಧನೂರು ಭಗತ್‌ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಸದಸ್ಯ ರಾಘವೇಂದ್ರ ಉಪ್ಪಳ ಇದ್ದರು.
ಸಿಂಧನೂರಿನ ತಾಲೂಕು ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡಗೆ ಸಿಪಿಐ (ಎಂಎಲ್) ಲಿಬರೇಷನ್ ಮುಖಂಡರು ಸೋಮವಾರ ಮನವಿ ಸಲ್ಲಿಸಿದರು. ಕಾರ್ಯದರ್ಶಿ ನಾಗರಾಜ್ ಪೂಜಾರ್, ಸಿಂಧನೂರು ಭಗತ್‌ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಸದಸ್ಯ ರಾಘವೇಂದ್ರ ಉಪ್ಪಳ ಇದ್ದರು.
Published on
ಸಿಂಧನೂರು: ತಾಲೂಕು ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಮಗ್ರವಾಗಿ ಸುಧಾರಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂಎಲ್) ಲಿಬರೇಷನ್ ವತಿಯಿಂದ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ನಗರದ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಚಿಕಿತ್ಸೆ ಪಡೆಯಲು ರೋಗಿಗಳು ವೈದ್ಯರಿಗಾಗಿ ಗಂಟೆಗಟ್ಟಲೆ ಕಾಯುವಂತಾಗಿದೆ. ಔಷಧಗಳ ಕೊರತೆ, ಸಿಬ್ಬಂದಿ ನಡುವಿನ ಹೊಂದಾಣಿಕೆ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಜನರು ದೂರುತ್ತ ಬಂದಿದ್ದಾರೆ. ಬಡಜನರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಹೆಸರಿಗೆ ಮಾತ್ರ 100 ಹಾಸಿಗೆವುಳ್ಳ ಆಸ್ಪತ್ರೆಯಾಗಿದ್ದು, ಚಿಕಿತ್ಸೆಗೆ ಬರುವವರು ಒಂದಿಲ್ಲೊಂದು ಸಮಸ್ಯೆ, ಸವಾಲು ಎದುರಿಸುತ್ತಿದ್ದಾರೆ ಎಂದರು. 
ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿ ಆರಂಭಿಸಿರುವ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಹಲವು ಕೊರತೆಗಳಿವೆ. ಇದರಿಂದ ಮಹಿಳೆಯರು ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲ. 60 ಹಾಸಿಗೆ ಆಸ್ಪತ್ರೆಗೆ ಈವರೆಗೂ ಪೂರ್ಣ ಪ್ರಮಾಣದ ವೈದ್ಯ ಸಿಬ್ಬಂದಿಯನ್ನು ನೇಮಿಸಿಲ್ಲ. ಅಗತ್ಯ ಸೌಕರ್ಯಗಳ ಕೊರತೆ ಕಾಡುತ್ತಿದೆ. ಇದರಿಂದ ಬಾಣಂತಿಯರು ಸಮಸ್ಯೆ ಅನುಭವಿಸುತ್ತಿದ್ದಾರೆ. ತಾಲೂಕು ಆಸ್ಪತ್ರೆಯಲ್ಲಿ ಕೊರತೆ ಇರುವ ಎಲ್ಲ ರೀತಿಯ ವೈದ್ಯಕೀಯ ಯಂತ್ರೋಪಕರಣಗಳು, ಸಾಮಗ್ರಿ ಪಟ್ಟಿ ಮಾಡಿ, ಒಂದು ತಿಂಗಳ ಒಳಗಾಗಿ ಆಸ್ಪತ್ರೆಯಲ್ಲಿ ವ್ಯವಸ್ಥೆಗೊಳಿಸಬೇಕು. ಮಂಜೂರಾದ ಹುದ್ದೆಗಳನ್ನು ಪೂರ್ಣ ಭರ್ತಿ ಮಾಡಬೇಕು. ಸಮಯಕ್ಕೆ ಸರಿಯಾಗಿ ವೈದ್ಯರು ಹಾಜರಿದ್ದು ಮಹಿಳೆಯರು ಮತ್ತು ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು. 
ಸಂಘದ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್, ಸಿಂಧನೂರು ಭಗತ್‌ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಸದಸ್ಯರಾದ ರಾಘವೇಂದ್ರ ಉಪ್ಪಳ, ಶ್ರೀನಿವಾಸ ಬುಕ್ಕನಟ್ಟಿ, ಮಹಾದೇವ ಅಮರಾಪುರ, ಕಂಠೆಪ್ಪ ರೈತನಗರ ಕ್ಯಾಂಪ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net