ಆಡಳಿತಾಧಿಕಾರಿಗಳಿಗೆ ಭದ್ರತೆ ಒದಗಿಸಲಿ

ಮಸ್ಕಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ತಹಸೀಲ್ದಾರ್ ಮಂಜುನಾಥ ಭೋಗಾವತಿ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಗೌರವ ಅಧ್ಯಕ್ಷ ಮಹಾಂತೇಶ, ಉಪಾಧ್ಯಕ್ಷ ಅಮರೇಶ ಸಜ್ಜನ್, ಪ್ರಧಾನ ಕಾರ್ಯದರ್ಶಿ ಮೌನೇಶ ಪವಾರ, ಕೋಶಾಧ್ಯಕ್ಷ ಪ್ರೇಮಕುಮಾರ, ಉಮಾದೇವಿ, ಗಂಗಪ್ಪ ಪವಾರ, ಅಬುಬಕರ್, ಹನುಮಂತ, ಮೋಹನ್, ರಾಮಪ್ಪ, ರಾಕೇಶ, ಅಮರೇಶ ಮಾಟೂರು ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಇಲಾಖೆ
  • ಗ್ರಾಮ
  • ಆಡಳಿತಾಧಿಕಾರಿ
ಮಸ್ಕಿ: ಮಾಗಡಿ ತಾಲೂಕಿನ ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಗ್ರಾಮ ಆಡಳಿತಾಧಿಕಾರಿ ಮೇಲೆ ಹಲವರು ಹಲ್ಲೆ ಮಾಡಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮಸ್ಕಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ಬುಧವಾರ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಸಲ್ಲಿಸಲಾಯಿತು.
ಅಧ್ಯಕ್ಷ ಶಿವಪ್ಪ ರಾಠೋಡ ಮಾತನಾಡಿ, ದಾರಿ ಒತ್ತುವರಿ ತೆರವು ಮಾಡುವ ವಿಚಾರವಾಗಿ ಸರ್ವೇಯರ್ ಮತ್ತು ಗ್ರಾಮ ಆಡಳಿತಾಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸ್ಥಳೀಯರಾದ ಮೋಹನ್ ಕುಮಾರ, ಚಂದ್ರಶೇಖರ, ಜಯಲಕ್ಷ್ಮಮ್ಮ ಅವರು ಗ್ರಾಮ ಆಡಳಿತಾಧಿಕಾರಿ ಹಡಗಲಿ ಹೊನ್ನಪ್ಪ ಅವರ ಮೇಲೆ ಹಲ್ಲೆ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳ ಮೇಲೆ ಅನಾವಶ್ಯಕವಾಗಿ ಹಲ್ಲೆ, ಮಾನಸಿಕ ಹಿಂಸೆಯಂತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಗ್ರಾಮ ಆಡಳಿತಾಧಿಕಾರಿಗಳು ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ತೊಂದರೆ ಆಗಿದೆ. ಕ್ಷೇತ್ರ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಗ್ರಾಮ ಆಡಳಿತಾಧಿಕಾರಿಗಳಿಗೆ ಭದ್ರತೆ ಒದಗಿಸಬೇಕು. ಸರ್ಕಾರಿ ಜಮೀನುಗಳ ಒತ್ತುವರಿಯನ್ನು ತಹಸೀಲ್ದಾರ್ ಮತ್ತು ಉಪ ತಹಸೀಲ್ದಾರ್ ಸಮಕ್ಷಮ ಪೊಲೀಸ್ ಇಲಾಖೆಯ ರಕ್ಷಣೆಯೊಂದಿಗೆ ಪರಿಶೀಲಿಸಬೇಕು.
ಪೊಲೀಸ್ ಇಲಾಖೆಯಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವ ಗ್ರಾಮ ಆಡಳಿತಾಧಿಕಾರಿಗಳಿಗೆ ರಿಸ್ಕ್ ಅಲೋಯನ್ಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net