ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ್ ನಾಯಕ ಮಾತನಾಡಿ, ಪುರುಷರಿಗೆ ಪುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕ್ರಿಕೆಟ್, ಬ್ಯಾಸ್ಕೆಟ್‌ಬಾಲ್ ಇತರೆ ಗುಂಪು ಕ್ರೀಡೆಗಳು ಹಾಗೂ ವೈಯಕ್ತಿಕ ಕ್ರೀಡೆಗಳಾದ ಚೆಸ್, ಓಟ, ಈಜು, ಗುಂಡು ಎಸೆತ ಸೇರಿದಂತೆ ಇತರ ಕ್ರೀಡೆಗಳು ಹಾಗೂ ಮಹಿಳೆಯರಿಗೆ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಇತರೆ ಗುಂಪು ಕ್ರೀಡೆಗಳ ಜೊತೆಗೆ ವೈಯಕ್ತಿಕ ಕ್ರೀಡೆಗಳಾದ ಚೆಸ್, ರನ್ನಿಂಗ್, ಈಜು, ಗುಂಡು ಎಸೆತ ಸೇರಿದಂತೆ ಇತರೆ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.