ಕವಿತಾಳ: ಮಕ್ಕಳ ಪ್ರತಿಭೆ ಗುರುತಿಸಿ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು ಎಂದು ಸಿಆರ್‌ಪಿ ಸೌಮ್ಯಶ್ರೀ ಹೇಳಿದರು. ಹಿರೇಹಣಗಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಏರ್ಪಡಿಸಿದ್ದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮಗುವಿನಲ್ಲಿ ಒಂದಿಲ್ಲೊಂದು ಕೌಶಲ ಇದ್ದೇ ಇರುತ್ತದೆ. ಅದನ್ನು ಪಾಲಕರು, ಶಿಕ್ಷಕರು ಹೊರತರುವ ಪ್ರಯತ್ನ ಮಾಡಬೇಕು ಎಂದರು. 11 ಶಾಲೆಗಳ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.