ಅಕ್ಕಿ ಬದಲಿಸಿ, ನಿತ್ಯ ಕಾಯಿಪಲ್ಲೆ ಖರೀದಿಸಿ

ಸಿಂಧನೂರಿನ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯಕ್ಕೆ ಶುಕ್ರವಾರ ಶಾಸಕ ಹಂಪನಗೌಡ ಬಾದರ್ಲಿ ಭೇಟಿ ನೀಡಿ, ತರಕಾರಿ ಪರಿಶೀಲಿಸಿದರು. ತಹಸೀಲ್ದಾರ್ ಅರುಣ್ ದೇಸಾಯಿ, ತಾಪಂ ಇಒ ಚಂದ್ರಶೇಖರ ಗುಂಜಳ್ಳಿ, ಡಿವೈಎಸ್ಪಿ ಚಂದ್ರಶೇಖರ ನಾಯಕ ಇತರರಿದ್ದರು.
ಸಿಂಧನೂರಿನ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯಕ್ಕೆ ಶುಕ್ರವಾರ ಶಾಸಕ ಹಂಪನಗೌಡ ಬಾದರ್ಲಿ ಭೇಟಿ ನೀಡಿ, ತರಕಾರಿ ಪರಿಶೀಲಿಸಿದರು. ತಹಸೀಲ್ದಾರ್ ಅರುಣ್ ದೇಸಾಯಿ, ತಾಪಂ ಇಒ ಚಂದ್ರಶೇಖರ ಗುಂಜಳ್ಳಿ, ಡಿವೈಎಸ್ಪಿ ಚಂದ್ರಶೇಖರ ನಾಯಕ ಇತರರಿದ್ದರು.
Published on
ಸಿಂಧನೂರುಉಪಾಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ನಗರದ ಒಳಬಳ್ಳಾರಿ ರಸ್ತೆ ಮಾರ್ಗದಲ್ಲಿರುವ ಅಲ್ಪಸಂಖ್ಯಾತರ ವಸತಿ ನಿಲಯಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ಹಾಸ್ಟೆಲ್‌ನಲ್ಲಿ ಸಮಸ್ಯೆಗಳು ಮತ್ತು ಮೂಲಸೌಕರ್ಯಗಳ ಕೊರತೆ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ವಿದ್ಯಾರ್ಥಿಗಳು ಕುಡಿವ ನೀರು, ಸ್ವಚ್ಛತೆ, ಆಹಾರದ ಗುಣಮಟ್ಟ ಹಾಗೂ ವಸತಿ ನಿಲಯದ ನಿರ್ವಹಣೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಶಾಸಕರು, ವಾರ್ಡನ್ ಅವರನ್ನು ತರಾಟೆಗೆ ತೆಗೆದುಕೊಂಡು, ವಿದ್ಯಾರ್ಥಿಗಳಿಗೆ ಇನ್ಮುಂದೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಬೇಕೆಂದು ತಾಕೀತು ಮಾಡಿದರು.
ಈಗ ವಸತಿ ನಿಲಯದಲ್ಲಿ ಅಡುಗೆಗೆ ಬಳಸುವ ಕಾಯಿಪಲ್ಲೆ ಸರಿಯಾಗಿಲ್ಲ. ನಿತ್ಯ ಖರೀದಿಸಿ ತರಬೇಕು. ಅಕ್ಕಿಯನ್ನು ಬದಲಾಯಿಸಲು ಕ್ರಮವಹಿಸಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಹಾಸ್ಟೆಲ್‌ನಲ್ಲಿ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಸೂಚಿಸಿದರು.
ಊಟ ಸವಿದ ಶಾಸಕ: ವಸತಿ ನಿಲಯದ ವಿದ್ಯಾರ್ಥಿಗಳು ಉಪಾಹಾರದಲ್ಲಿ ವ್ಯತ್ಯಾಸದಿಂದ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು. ೀ ವೇಳೆ ಬೆಂಗಳೂರಿನಲ್ಲಿದ್ದ ಶಾಸಕರು ಕರೆ ಮಾಡಿ ಎಲ್ಲರ ಯೋಗ-ಕ್ಷೇಮ ವಿಚಾರಿಸಿದ್ದರು. ಶುಕ್ರವಾರ ಖುದ್ದಾಗಿ ವಸತಿ ನಿಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಬೆಳಗಿನ ಉಪಾಹಾರ ಸೇವಿಸಿದರು. ಎಲ್ಲರೂ ಚೆನ್ನಾಗಿ ಓದಬೇಕೆಂದು ತಿಳಿಸಿದರು.
ತಹಸೀಲ್ದಾರ್ ಅರುಣ್ ದೇಸಾಯಿ, ತಾಪಂ ಇಒ ಚಂದ್ರಶೇಖರ ಗುಂಜಳ್ಳಿ, ಡಿವೈಎಸ್ಪಿ ಚಂದ್ರಶೇಖರ ನಾಯಕ, ಪಿಐ ವೀರಾರಡ್ಡಿ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ಪಿಎಸ್‌ಐ ಎರಿಯಪ್ಪ, ಡಿಎಚ್‌ಒ ನಂದಿತಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವೈ.ಅನಿಲ್‌ಕುಮಾರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ಸಿದ್ದನಗೌಡ ವಿರುಪಾಪುರ, ಆರ್.ಸಿ.ಪಾಟೀಲ್, ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯನಾರಾಯಣ ಶ್ರೇಷ್ಠಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net