ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಸೋಮವಾರ ಜಿಲ್ಲಾಧಿಕಾರಿ ಎಸ್.ಪೂವಿತಾ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ತಹಶಿಲ್ದಾರರೊಂದಿಗೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಶಿವಾನಂದ, ಎಸಿಗಳಾದ ಡಾ.ಹಂಪಣ್ಣ ಸಜ್ಜನ್, ಬಸವಣ್ಣೆಪ್ಪ ಕಲಶೆಟ್ಟಿ,  ತಹಶಿಲ್ದಾರ್‌ಗಳಾದ ಸುರೇಶ್ ವರ್ಮಾ, ಸತ್ಯಮ್ಮ, ನಾಗಮ್ಮ ಕಟ್ಟಿಮನಿ, ಅರುಣ್ ಕುಮಾರ್ ದೇಸಾಯಿ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಸೋಮವಾರ ಜಿಲ್ಲಾಧಿಕಾರಿ ಎಸ್.ಪೂವಿತಾ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ತಹಶಿಲ್ದಾರರೊಂದಿಗೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಶಿವಾನಂದ, ಎಸಿಗಳಾದ ಡಾ.ಹಂಪಣ್ಣ ಸಜ್ಜನ್, ಬಸವಣ್ಣೆಪ್ಪ ಕಲಶೆಟ್ಟಿ, ತಹಶಿಲ್ದಾರ್‌ಗಳಾದ ಸುರೇಶ್ ವರ್ಮಾ, ಸತ್ಯಮ್ಮ, ನಾಗಮ್ಮ ಕಟ್ಟಿಮನಿ, ಅರುಣ್ ಕುಮಾರ್ ದೇಸಾಯಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಸೌಲಭ್ಯ ದೊರೆಯಲಿ- ಡಿಸಿ
  • ಸಾರ್ವಜನಿಕರಿಂದ ಸ್ವೀಕರಿಸಲ್ಪಟ್ಟ ಅರ್ಜಿಗಳ ಪ್ರಗತಿ ಪರಿಶೀಲನೆ ನಡೆಸಿ,
ರಾಯಚೂರು
ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಯೋಜನೆ, ಸೌಲಭ್ಯಗಳು ದೊರೆಯಬೇಕು. ಅಲ್ಲದೆ ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಎಸ್.ಪೂವಿತಾ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಸೋಮವಾರ ಜಿಲ್ಲೆಯ ವಿವಿಧ ತಾಲೂಕಿನ ತಹಶಿಲ್ದಾರರೊಂದಿಗೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಆಡಳಿತಾತ್ಮಕ ಸುಧಾರಣೆ, ಭೂ ದಾಖಲೆಗಳ ನಿರ್ವಹಣೆ ಮತ್ತು ಸಾರ್ವಜನಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪೋಡಿ, ದುರಸ್ತಿ, ಪಹಣಿ ತಿದ್ದುಪಡಿ, ಮತ್ತು ಭೂ ಒತ್ತುವರಿ ತೆರವು ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಿಂಚಣಿ ಯೋಜನೆಗಳು, ಆರ್‌ಟಿಸಿ ವಿತರಣೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಕಾಲಮಿತಿಯೊಳಗೆ ಜನರಿಗೆ ತಲುಪಿಸಬೇಕು. ಸರ್ಕಾರದ ಬಾಕಿ ಬಿದ್ದಿರುವ ಕಂದಾಯ, ಮತ್ತು ಮರಳು ಗಣಿಗಾರಿಕೆಯ ಮೇಲಿನ ದಂಡಗಳನ್ನು ಸಮರ್ಪಕವಾಗಿ ವಸೂಲಿ ಮಾಡಬೇಕು. ಅಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಪರಿಹಾರ ಕ್ರಮಗಳ ಕುರಿತು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಸಂಬಅಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೆಳಮಟ್ಟದ ಕಂದಾಯ ಕಚೇರಿಗಳಾದ ನಾಡ ಕಚೇರಿಗಳು ಮತ್ತು ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪಾರದರ್ಶಕ ಆಡಳಿತ ಸಂಬಅಧಿಸಿದ ಅಧಿಕಾರಿಗಳು ನೀಡಬೇಕು. ಹಾಗೂ ಸಾರ್ವಜನಿಕರಿಂದ ಸ್ವೀಕರಿಸಲ್ಪಟ್ಟ ಅರ್ಜಿಗಳ ಪ್ರಗತಿ ಪರಿಶೀಲನೆ ನಡೆಸಿ, ನಿಗದಿತ ಗಡುವಿನೊಳಗೆ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದರು.

ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಎಸಿಗಳಾದ ಡಾ.ಹಂಪಣ್ಣ ಸಜ್ಜನ್, ಬಸವಣ್ಣೆಪ್ಪ ಕಲಶೆಟ್ಟಿ, ತಹಶಿಲ್ದಾರ್‌ಗಳಾದ ಸುರೇಶ್ ವರ್ಮಾ, ಸತ್ಯಮ್ಮ, ನಾಗಮ್ಮ ಕಟ್ಟಿಮನಿ, ಅರುಣ್ ಕುಮಾರ್ ದೇಸಾಯಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಕಂದಾಯ ವಿಭಾಗದ ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net