ಜ.18 ರಂದು ಸಂಕ್ರಾಂತಿ ಸಂಭ್ರಮ ಹಾಗೂ ಪುಸ್ತಕ ಸಂತೆ

ಮಾರುತಿ ಬಡಿಗೇರ
ಮಾರುತಿ ಬಡಿಗೇರ
Published on
ರಾಯಚೂರು ಕಲಾ ಸಂಕುಲ ಸಂಸ್ಥೆ ಹಾಗೂ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ.18 ರಂದು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸಂಕ್ರಾಂತಿ ಸಂಭ್ರಮ ಹಾಗೂ ಪುಸ್ತಕ ಸಂತೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆಂದು ಕಲಾ ಸಂಕುಲ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 10 ಗಂಟೆಗೆ ಪುಸ್ತಕ ಸಂತೆಯನ್ನು ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಕೆಳಗಿನಮನಿ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿಗಳಾದ ವೀರ ಹನುಮಾನ, ಬಾಬು ಭಂಡಾರಿಗಲ್, ಚಿದಾನಂದಸಾಲಿ,ಅಯ್ಯಪ್ಪಯ್ಯ ಹುಡಾ, ಈರಣ್ಣ ಬೆಂಗಾಲಿ, ಜಾನವೆಸ್ಲಿ, ವೆಂಕಟೇಶ ಬೇವಿನ ಬೆಂಚಿ, ರೇಖಾ ಬಡಿಗೇರಾ ಭಾಗವಹಿಸಲಿದ್ದಾರೆ.
ಪುಸ್ತಕ ಪ್ರದರ್ಶನ, ಮಾರಾಟದಲ್ಲಿ 20 ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ ಎಂದರು. ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮವನ್ನು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತಕುಮಾರ, ಕೆಪಸಿಸಿ ಕಾರ್ಯದರ್ಶಿ ಕೆ.ಅಸ್ಲಂಪಾಷಾ, ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಅನಿತಾ ಹೀರೆಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ ಸೇರಿ ಅನೇಕರು ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಅಮರೇಗೌಡ, ಸೈಯದ್ ವಲಿ, ಮೌನೇಶ ವಡವಾಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net