ದೇಶಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ

ಲಿಂಗಸುಗೂರಿನ ಗುರುಭವನದಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನ ಕಾರ್ಯಕ್ರಮವನ್ನು ಬಿಇಒ ಸುಜಾತಾ ಹೂನೂರು ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಕ್ವಾರಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಜಿಬಾಬು ಕಲ್ಯಾಣಿ, ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ಸುನಂದಾ ಮೋದಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಲಿಂಗ ಗದ್ದಿ ಇತರರಿದ್ದರು.
ಲಿಂಗಸುಗೂರಿನ ಗುರುಭವನದಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನ ಕಾರ್ಯಕ್ರಮವನ್ನು ಬಿಇಒ ಸುಜಾತಾ ಹೂನೂರು ಉದ್ಘಾಟಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಕ್ವಾರಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಜಿಬಾಬು ಕಲ್ಯಾಣಿ, ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ಸುನಂದಾ ಮೋದಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಲಿಂಗ ಗದ್ದಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹೂನೂರು
  • ಲಿಂಗಸುಗೂರಿನಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ
ಲಿಂಗಸುಗೂರು: ಭಾರತದ ಮೊದಲ ಶಿಕ್ಷಕಿ ಮತ್ತು ಸಮಾಜ ಸುಧಾರಕಿಯಾಗಿ ಸಾವಿತ್ರಿಬಾಯಿ ಫುಲೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹೂನೂರು ಹೇಳಿದರು.
ಪಟ್ಟಣದ ಗುರುಭವನದಲ್ಲಿ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ ನವದೆಹಲಿ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾವಿತ್ರಿಬಾಯಿ ಫುಲೆ ಅವರು ಬಾಲ್ಯವಿವಾಹ ವಿರೋಧಿಸಿ ಪ್ರಚಾರ ಮಾಡಿದರು. ವಿಧವಾ ಪುನರ್ವಿವಾಹವನ್ನು ಪ್ರತಿಪಾದಿಸಿದರು. ಮಹಿಳೆಯರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿದರು. ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡಿದ್ದಾರೆ. ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಪ್ರಾಮಾಣಿಕ ಸೇವೆ ಮಾಡಬೇಕೆಂದು ತಿಳಿಸಿದರು.
ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಛಾಯಾದೇವಿ ಮಾತನಾಡಿ, ರಾಯಚೂರಲ್ಲಿ ಸಾವಿತ್ರಿಬಾಯಿ ಫುಲೆ ವೃತ್ತ ಇದೆ. ಮುಂದಿನ ದಿನಗಳಲ್ಲಿ ಪುತ್ಥಳಿ ಅನಾವರಣ ಮಾಡುತ್ತೇವೆ. ಸಾವಿತ್ರಿಬಾಯಿ ಫುಲೆ ಜನ್ಮದಿನವಾದ ಜ.3ರಂದು ಶಿಕ್ಷಕಿಯರ ದಿನವಾಗಿ ಆಚರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು. ಅಬಕಾರಿ ನಿರೀಕ್ಷಕಿ ಲಕ್ಷ್ಮೀದೇವಿ ಮಾತನಾಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಕ್ವಾರಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಜಿಬಾಬು ಕಲ್ಯಾಣಿ, ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ಸುನಂದಾ ಮೋದಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಲಿಂಗ ಗದ್ದಿ, ಪ್ರಮುಖರಾದ ಬಸಪ್ಪ ಹಂದ್ರಾಳ, ವಿಜಯಲಕ್ಷ್ಮೀ, ಗುರುಸಂಗಯ್ಯ ಗಣಾಚಾರಿ, ಅಮರಪ್ಪ ಸಾಲಿ, ಸಂಗಪ್ಪ ಅಡವಿಭಾವಿ, ಶಾಂತೇಶ ವಗ್ಗರ, ಗಂಗಣ್ಣ ದೇವರಮನಿ, ಲಕ್ಷ್ಮೀಬಾಯಿ ನಡುವಿನಮನಿ, ಡಾ. ಶಶಿಕಲಾ ಭೋವಿ, ರಮಾದೇವಿ ಸಿಂಧನೂರು, ಈರಮ್ಮ ಕುಂಬಾರ, ಲಕ್ಷ್ಮೀ ಗುರುರಾಜ, ಧನಲಕ್ಷ್ಮೀ, ಸುಶ್ರಿತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net