ಕೆನರಾ ಬ್ಯಾಂಕ್‌ನಿಂದ ವಿದ್ಯಾರ್ಥಿವೇತನ ವಿತರಣೆ

ಕೆನರಾ ಬ್ಯಾಂಕ್ ಕೆನರಾ ವಿದ್ಯಾ ಜ್ಯೋತಿ ಯೋಜನೆಯಡಿ ಜಿಲ್ಲೆಯ 24 ಶಾಖೆಗಳಿಂದ 144 ವಿದ್ಯಾರ್ಥಿಗಳಿಗೆ ಶನಿವಾರ ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ 5.76 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಶಾಸಕ ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತಕುಮಾರ, ಜಿಲ್ಲಾಧಿಕಾರಿ ಪೂವಿತಾ ಎಸ್., ಕೆನರಾ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥೆ ಯು. ರಾಜೇಶ್ವರಿ, ಶಾಖೆಯ ಡಿಎಂ ಜಿ.ಕೃಷ್ಣ, ಸಿಬ್ಬಂದಿ ಅಜೀತ್ ಕುಮಾರ ಇದ್ದರು.

Published on

ಕೆನರಾ ಬ್ಯಾಂಕ್ ಕೆನರಾ ವಿದ್ಯಾ ಜ್ಯೋತಿ ಯೋಜನೆಯಡಿ ಜಿಲ್ಲೆಯ 24 ಶಾಖೆಗಳಿಂದ 144 ವಿದ್ಯಾರ್ಥಿಗಳಿಗೆ ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ 5.76 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿದರು.

ಕೆನರಾ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥೆ ಯು. ರಾಜೇಶ್ವರಿ ಮಾತನಾಡಿ, ಕೆನರಾ ಬ್ಯಾಂಕ್‌ನ 24 ಶಾಖೆಗಳ ಮೂಲಕ ಮೂಲಕ ಜಿಲ್ಲೆಯ 5ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ 144 ವಿದ್ಯಾರ್ಥಿನಿರನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. 5ರಿಂದ 7ನೇ ತರಗತಿಯ ವಿದ್ಯಾರ್ಥಿನಿಯರಿಗೆ ತಲಾ 3,000 ರೂ. 8ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ತಲಾ 5,000 ರೂ. ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಬಾಲಕಿಯರು ತಮ್ಮ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುವುದು ಹಾಗೂ ಅವರ ಶೈಕ್ಷಣಿಕ ಪ್ರಗತಿಗೆ ನೆರವಾಗುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net