ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ರಾಯಚೂರಿನ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಡಿಸಿ ಎಸ್. ಪೂವಿತಾ ಚಾಲನೆ ನೀಡಿದರು. ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಡಿಡಿಪಿಐ ಮಲ್ಲಿಕಾರ್ಜುನ, ಡಿಡಿಪಿಯು ಸೋಮಶೇಖರಪ್ಪ ಹೊಕ್ರಾಣಿ, ಡಿಎಚ್‌ಓ ಡಾ.ಸುರೇಂದ್ರ ಬಾಬು, ಬಿಇಓ ಈರಣ್ಣ ಕೋಸಗಿ, ಪ್ರಾಂಶುಪಾಲ ಕುಂಟೇಪ್ಪ ಇದ್ದರು.
ರಾಯಚೂರಿನ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಡಿಸಿ ಎಸ್. ಪೂವಿತಾ ಚಾಲನೆ ನೀಡಿದರು. ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಡಿಡಿಪಿಐ ಮಲ್ಲಿಕಾರ್ಜುನ, ಡಿಡಿಪಿಯು ಸೋಮಶೇಖರಪ್ಪ ಹೊಕ್ರಾಣಿ, ಡಿಎಚ್‌ಓ ಡಾ.ಸುರೇಂದ್ರ ಬಾಬು, ಬಿಇಓ ಈರಣ್ಣ ಕೋಸಗಿ, ಪ್ರಾಂಶುಪಾಲ ಕುಂಟೇಪ್ಪ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇರಲಿ -ಡಿಸಿ
ರಾಯಚೂರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ತಾವು ಸಾಧನೆ ಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯವೆಂದು ಜಿಲ್ಲಾಧಿಕಾರಿ ಎಸ್.ಪೂವಿತಾ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು.
ಚೆನ್ನಾಗಿ ಓದಿ ಉನ್ನತ ಹುದ್ದೆಗಳಾದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಧಿಕಾರಿ ಸೇರಿದಂತೆ ಇತರೆ ವಿವಿಧ ಉನ್ನತ ಹುದ್ದೆಗಳ ಕನಸು ಕಾಣಬೇಕು. ವಿದ್ಯಾರ್ಥಿಗಳು ಯಾರು ಶಾಲೆಯನ್ನು ಬಿಡದಂತೆ ನೋಡಿಕೊಳ್ಳಬೇಕು. ಶಾಲೆ ಬಿಟ್ಟಲಿ ಮರಳಿ ಶಾಲೆಗೆ ಕರೆ ತರುವ ಕೆಲಸ ಶಿಕ್ಷಕರಿಂದ ಆಗಬೇಕು ಎಂದರು.
ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ ಮಾತನಾಡಿ, ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ನೋಡಿ ನನಗೆ ಸಂತೋಷವಾಗಿದೆ. ಮಕ್ಕಳನ್ನು ನೋಡಿ, ನಮ್ಮ ಬಾಲ್ಯದ ನೆನಪು ಆಗುತ್ತದೆ. ಮಕ್ಕಳು ಒಂದು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿಯನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು. ಕಳೆದ ವರ್ಷದಂತೆ ಈ ವರ್ಷವು ವಿದ್ಯಾರ್ಥಿಗಳು ಹೆಚ್ಚಿನ ಮಟ್ಟದಲ್ಲಿ ಸಾಧ್ಯನೆ ಮಾಡಬೇಕು. ಅಲ್ಲದೆ ಶಾಲೆಯಲ್ಲಿ ಕಿಶೋರಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ. ಅಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿ, ಮಾಹಿತಿ ಪಡೆಯಬೇಕು. ಅಲ್ಲದೆ ನಿಮ್ಮ ಗೆಳೆಯರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದರು.
ನಂತರ ಸಾಂಕೇತಿಕವಾಗಿ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಂಟೇಪ್ಪ ಸೇರಿದಂತೆ ಶಾಲೆಯ ಮುಖ್ಯಗುರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net