ಸರ್ಕಾರ ರೈತರ ನೆರವು ನೀಡಲು ಶಿವಸೇನೆ ಪಕ್ಷದಿಂದ ಪ್ರತಿಭಟನೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ರೈತರು ಹಾಗೂ ಕೃಷಿ ಕಾರ್ಮಿಕರಿಗೆ ತಕ್ಷಣ ನೆರವು ನೀಡಬೇಕೆಂದು ಒತ್ತಾಯಿಸಿ ಶಿವಸೇನಾ ಕಾರ್ಯಕರ್ತರು ಗುರುವಾರ ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು. ಪ್ರಮುಖರಾದ ಹರೀಶ್ ಮಡಿವಾಳ, ಸಂತೋಷ್ ಗೌಡ ಗುಡಿ, ನರೇಶ್, ಬಾಬು ಗಣೇಶ್, ವೇಣುಗೋಪಾಲ, ರಾಘವೇಂದ್ರ, ಶಾಂತು, ವೀರೇಶ, ಜೆ.ಸಿ. ಹರಿಪ್ರಸಾದ್ ಇದ್ದರು.

Published on
ರಾಯಚುರು ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ರೈತರು ಹಾಗೂ ಕೃಷಿ ಕಾರ್ಮಿಕರಿಗೆ ತಕ್ಷಣ ನೆರವು ನೀಡಬೇಕೆಂದು ಒತ್ತಾಯಿಸಿ ಶಿವಸೇನಾ ಕಾರ್ಯಕರ್ತರು ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಕೃಷಿಯನ್ನೇ ಅವಲಂಬಿಸಿರುವ ರೈತರು ಹಾಗೂ ಕೃಷಿ ಕಾರ್ಮಿಕರ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿದ್ದು, ಸರ್ಕಾರ ತಕ್ಷಣ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬರಪೀಡಿತ ಪ್ರದೇಶಗಳಿಗೆ ವಿಶೇಷ ಅಧಿಕಾರಿಗಳನ್ನು ನೇಮಿಸಿ ಸ್ಥಳ ಪರಿಶೀಲನೆ ನಡೆಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಅನುದಾನ, ಉಚಿತ ಪಡಿತರ, ಬೆಳೆ ಸಾಲ ಮನ್ನಾ ಸೇರಿದಂತೆ ಅಗತ್ಯ ಪರಿಹಾರ ಕಲ್ಪಿಸಬೇಕು.
ಮಳೆಯಾಗಿರುವ ಪ್ರದೇಶಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ, ಕಳಪೆ ಬೀಜ ಮಾರಾಟ ಮತ್ತು ಕಳ್ಳ ಮಾರುಕಟ್ಟೆ ಮೂಲಕ ರೈತರನ್ನು ಶೋಷಿಸಲಾಗುತ್ತಿದೆ. ಇಂತಹ ಅಕ್ರಮಗಳನ್ನು ತಡೆಯಲು ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪಕ್ಷದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಹರೀಶ್ ಮಡಿವಾಳ, ಸಂತೋಷ್ ಗೌಡ ಗುಡಿ, ನರೇಶ್, ಬಾಬು ಗಣೇಶ್, ವೇಣುಗೋಪಾಲ, ರಾಘವೇಂದ್ರ, ಶಾಂತು, ವೀರೇಶ, ಜೆ.ಸಿ. ಹರಿಪ್ರಸಾದ್ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net