ಜ.14 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ನಾರಾಯಣಸ್ವಾಮಿ
ನಾರಾಯಣಸ್ವಾಮಿ
Published on
ರಾಯಚೂರು ಜಿಲ್ಲಾಡಳಿತದಿಂದ ಜ.14 ರಂದು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತದೆಂದು ಭೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ ನಗರ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಮೂರ್ತಿಗೆ ಪೂಜೆ, ಮಾಲಾರ್ಪಣೆ ನಡೆಸಲಾಗುತ್ತದೆ.ಅಲ್ಲಿಂದ ಭಾವಚಿತ್ರ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ತೆರಳಿ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರಕ್ಕೆ ಆಗಮಿಸಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.90 ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ, ಮಾಜಿ ಸೈನಿಕರಿಗೆ, ರೈತರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷತೆ ಶಶಿಕಲಾ ಭೀಮರಾಯ, ಆಂಜಿನೇಯ್ಯ ಗಾಣಧಾಳ, ನಾಗರಾಜ ಗೌಸನಗರ, ಕಾಶಿನಾಥ, ಲಕ್ಷ್ಮಣ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net