ಎಸ್‌ಐಆರ್, ಮತದಾನದ ಹಕ್ಕು ಕಸಿಯುವ ತಂತ್ರ

ಸಿಂಧನೂರಿನಲ್ಲಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮಟ್ಟದ ಏಜೆಂಟರಿಗೆ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು. ಎಂಎಲ್ಸಿ ಎ.ವಸಂತಕುಮಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ನಯೋಪ್ರಾ ಮಾಜಿ ಅಧ್ಯಕ್ಷ ಎಂ.ಕಾಳಿಂಗಪ್ಪ, ಜಿಪಂ ಮಾಜಿ ಸದಸ್ಯ ಆರ್.ತಿಮ್ಮಯ್ಯ ನಾಯಕ ಇತರರಿದ್ದರು.
ಸಿಂಧನೂರಿನಲ್ಲಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮಟ್ಟದ ಏಜೆಂಟರಿಗೆ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು. ಎಂಎಲ್ಸಿ ಎ.ವಸಂತಕುಮಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ನಯೋಪ್ರಾ ಮಾಜಿ ಅಧ್ಯಕ್ಷ ಎಂ.ಕಾಳಿಂಗಪ್ಪ, ಜಿಪಂ ಮಾಜಿ ಸದಸ್ಯ ಆರ್.ತಿಮ್ಮಯ್ಯ ನಾಯಕ ಇತರರಿದ್ದರು.
Published on
ಸಿಂಧನೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ದೇಶವ್ಯಾಪಿ ಕೋಟ್ಯಂತರ ಜನರ ಮತದಾನ ಹಕ್ಕನ್ನು ಕಸಿಯಲು ಕೇಂದ್ರ ಸರ್ಕಾರ ಹೊರಟಿದ್ದು, ಇದರ ವಿರುದ್ಧ ದೊಡ್ಡ ಅಭಿಯಾನ ನಡೆಸಬೇಕಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ಕೋಟೆ ಕಲ್ಯಾಣ ಮಂಟಪದಲ್ಲಿ ಭಾನುವಾರ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ನಡೆ, ನಿಮ್ಮ ಮತ ರಕ್ಷಣೆಯ ಕಡೆ, ಎಸ್‌ಐಆರ್ ಬಗ್ಗೆ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್‌ಎ-2)ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. 
ಈಗಾಗಲೇ 13 ರಾಜ್ಯಗಳಲ್ಲಿ ಎಸ್‌ಐಆರ್ ನಡೆಸಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರ ಹಾಕಲಾಗಿದ್ದು, ಇದರಲ್ಲಿ 5 ಕೋಟಿ ಅರ್ಹ ಮತದಾರರಿದ್ದಾರೆ. ಇದೇ ಸಂಚಿನಿಂದಲೇ ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಶೇಷ ಜಾಗೃತಿ ಮೂಡಿಸಲು ಮುಂದಾಗಿದೆ. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ಡಿಲಿಟ್ ಆಗದಂತೆ ತಡೆಯುವ ಬಗ್ಗೆ ಎಚ್ಚರವಹಿಸಲಾಗುತ್ತಿದೆ ಎಂದರು.
ಎಂಎಲ್ಸಿ ಎ.ವಸಂತಕುಮಾರ ಮಾತನಾಡಿ, ಎಸ್‌ಐಆರ್ ಮೂಲಕ ಅರ್ಹರನ್ನು ಮತದಾನದಿಂದ ದೂರವಿರಿಸಿ, ಬಿಜೆಪಿಗೆ ಲಾಭವಾಗುವ ರೀತಿಯಲ್ಲಿ ಮತದಾನ ಪರಿಷ್ಕರಣೆ ಹೆಸರಿನಲ್ಲಿ ಹೊಸ ಮತದಾರರನ್ನು ಸೇರ್ಪಡೆ ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅವಕಾಶ ನೀಡದೆ, ಎಚ್ಚರಿಕೆಯಿಂದ ಇರಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗಪ್ಪ ದಢೇಸುಗೂರು, ನಗರ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ಟಿ.ಸುಬ್ಬಾರಾವ್, ಲಿಂಗರಾಜ ಪಾಟೀಲ್, ಟಿಎಪಿಸಿಎಂಎಸ್ ಅಧ್ಯಕ್ಷ ಶರಣಪ್ಪ ರಡ್ಡೇರ್, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷ ಶ್ರೀದೇವಿ ಶ್ರೀನಿವಾಸ, ಎಂ.ರಂಗನಗೌಡ ಗೊರೇಬಾಳ, ಜಿಪಂ ಮಾಜಿ ಸದಸ್ಯ ಬಸವರಾಜ ಹಿರೇಗೌಡ, ಅಶೋಕ ಉಮಲೂಟಿ, ಹಂಪಯ್ಯಸ್ವಾಮಿ ರ‌್ಯಾವಿಹಾಳ, ರಾಮಣ್ಣ ಗೋನ್ವಾರ, ಛತ್ರಪ್ಪ ಕುರುಕುಂದ, ಶಬ್ಬೀರ್ ನಾಯಕ, ಮುರಳಿಕೃಷ್ಣ ಇದ್ದರು. 
"

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಎರಡನೇ ಸಚಿವ ಸಂಪುಟದಲ್ಲಿ ಸಿಂಧನೂರಿಗೆ ಅದೃಷ್ಟ ಒಲಿಯುವ ನಿರೀಕ್ಷೆ ಇದೆ. ಸಚಿವ ಸ್ಥಾನ ಸಿಗುವ ಭರವಸೆ ಹೊಂದಿರುವೆ. ಎಲ್ಲದಕ್ಕೂ ಕಾಲ ಕೂಡಿಬರಬೇಕು.

— ಹಂಪನಗೌಡ ಬಾದರ್ಲಿ ಶಾಸಕ, ಸಿಂಧನೂರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net