ಕಾಂಗ್ರೆಸ್ ಕಚೇರಿಗೆ ನಿವೇಶನ ಮಂಜೂರು

ಲಿಂಗಸುಗೂರು ನಗರ ಯೋಜನಾ ಪ್ರಾಧಿಕಾರದಿಂದ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಸಿಎ ನಿವೇಶನ ಮಂಜೂರು ಪ್ರಸ್ತಾವನೆ ಪ್ರತಿ.
ಲಿಂಗಸುಗೂರು ನಗರ ಯೋಜನಾ ಪ್ರಾಧಿಕಾರದಿಂದ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಸಿಎ ನಿವೇಶನ ಮಂಜೂರು ಪ್ರಸ್ತಾವನೆ ಪ್ರತಿ.
Published on
ಲಿಂಗಸುಗೂರು: ಪಟ್ಟಣದಲ್ಲಿ ಕಾಂಗ್ರೆಸ್ ಕಚೇರಿಗಾಗಿ ನಾಗರಿಕ ಸೌಲಭ್ಯಗಳಿಗೆ ಮೀಸಲಿಟ್ಟ ಸಿಎ ನಿವೇಶನವನ್ನು ಸರ್ಕಾರ ಮಂಜೂರು ಮಾಡಿದೆ. 2026 ಜ.2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ನಾಗರಿಕ ಸೌಲಭ್ಯ ನಿವೇಶನಗಳನ್ನು ಕಾಂಗ್ರೆಸ್ ಪಕ್ಷದ ಬ್ಲಾಕ್ ಕಚೇರಿ ಕಟ್ಟಡಗಳ ನಿರ್ಮಾಣಕ್ಕೆ ಮಂಜೂರು ಮಾಡಲು ಒಪ್ಪಿಗೆ ನೀಡಿದೆ.
ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಗ್ರಾಮದ ಸರ್ವೇ ನಂ. 13/8 ರಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 2024 ಡಿ.4ರಂದು ನಗರ ಯೋಜನಾ ಪ್ರಾಧಿಕಾರಕ್ಕೆ ಕೋರಿ ಪತ್ರ ಬರೆಯಲಾಗಿತ್ತು.
ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಲು ಮುಂದಿನ ಕ್ರಮಕ್ಕಾಗಿ ಲಿಂಗಸುಗೂರು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಿಗಳು, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರಿಗೆ 2025 ಅ.27ರಂದು ಪತ್ರ ಬರೆದಿದ್ದರು.
ನಾಗರಿಕ ಸೌಲಭ್ಯ ನಿವೇಶನಕ್ಕೆ ಉಪನೋಂದಣಿ ಕಚೇರಿ ಲಿಂಗಸುಗೂರು ಇವರ ಮಾರುಕಟ್ಟೆ ದರ 4,400ರೂ. ದಂತೆ ಒಟ್ಟು 46,99,200 ರೂ. ಕರಾರು ಮೊತ್ತ ನಿಗದಿ ಪಡಿಸಬಹುದಾಗಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಸಚಿವ ಸಂಪುಟದ ನಿರ್ಣಯದಂತೆ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಶೇ.5 ರಿಯಾಯಿತಿ ದರದಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಲಾಗಿದೆ.
"

ಲಿಂಗಸುಗೂರು ಪುರಸಭೆ ವ್ಯಾಪ್ತಿಯ ನಾಗರಿಕ ಸೌಲಭ್ಯ ನಿವೇಶನ ಮಂಜೂರು ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕೋರಿತ್ತು. ಸರ್ಕಾರದ ಹಂತದಲ್ಲಿ ಪರಿಶೀಲಿಸಲು ಪ್ರಸ್ತಾವನೆಯನ್ನು ನಗರಾಭಿವೃದ್ಧಿ ಇಲಾಖೆ ಆಯುಕ್ತರಿಗೆ ಸಲ್ಲಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net