ಎಸ್‌ಕೆಡಿಆರ್‌ಡಿಪಿಯಿಂದ ಸಮಾಜಮುಖಿ ಕಾರ್ಯ

ಅರಕೇರಾದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆರ್‌ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ರಾಜಶೇಖರ ನಾಯಕ ಉದ್ಘಾಟಿಸಿದರು. ನಿವೃತ್ತ ಬ್ಯಾಂಕ್ ಅಧಿಕಾರಿ ಕೆ.ಅನಂತರಾಜ ನಾಯಕ, ಎಸ್‌ಕೆಡಿಆರ್‌ಡಿಪಿ ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಾತೆಗರ್, ಟಿಎಪಿಸಿಎಂಎಸ್ ನಿರ್ದೇಶಕ ಚನ್ನವೀರಯ್ಯ ಸ್ವಾಮಿ ಹಿರೇಮಠ, ಗ್ರಾಪಂ ಮಾಜಿ ಅಧ್ಯಕ್ಷೆ ರಂಗಮ್ಮ ನಾಯಕ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಆರ್‌ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ರಾಜಶೇಖರ ನಾಯಕ ಅಭಿಮತ
  • ಅರಕೇರಾ ನೇತ್ರ ತಪಾಸಣಾ ಶಿಬಿರ
ಅರಕೇರಾ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ ಬಡ ವರ್ಗಕ್ಕೆ ಶ್ರೀರಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರ್‌ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ರಾಜಶೇಖರ ನಾಯಕ ಹೇಳಿದರು.
ಶ್ರೀ ಸೂಗೂರೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ, ರಾಯಚೂರಿನ ದೃಷ್ಟಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡುವ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದರು.
ನಿವೃತ್ತ ಬ್ಯಾಂಕ್ ಅಧಿಕಾರಿ ಕೆ.ಅನಂತರಾಜ ನಾಯಕ ಮಾತನಾಡಿ, ಪಂಚೇಂದ್ರಿಯಗಳಲ್ಲಿ ಕಣ್ಣು ಅತ್ಯಂತ ಮುಖ್ಯವಾದದ್ದು, ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದರು.
ಎಸ್‌ಕೆಡಿಆರ್‌ಡಿಪಿ ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಾತೆಗರ್ ಮಾತನಾಡಿದರು. ಶಿಬಿರದಲ್ಲಿ 130 ಜನ ನೇತ್ರ ತಪಾಸಣೆ ಮಾಡಿಸಿಕೊಂಡರು. 32 ಜನರಿಗೆ ದೃಷ್ಟಿದೋಷ ಕಂಡುಬಂದಿದ್ದು, 28 ಜನರಿಗೆ ಕನ್ನಡಕ ವಿತರಿಸಲಾಯಿತು. ಟಿಎಪಿಸಿಎಂಎಸ್ ನಿರ್ದೇಶಕ ಚನ್ನವೀರಯ್ಯ ಸ್ವಾಮಿ ಹಿರೇಮಠ, ಗ್ರಾಪಂ ಮಾಜಿ ಅಧ್ಯಕ್ಷೆ ರಂಗಮ್ಮ ನಾಯಕ, ನಿವೃತ್ತ ಬಿಪಿಎಂ ಬಸವರಾಜಪ್ಪ ಗುಡಿ, ನಿವೃತ್ತ ಬ್ಯಾಂಕ್ ಉದ್ಯೋಗಿ ಬಸವರಾಜ ಸ್ವಾಮಿ, ತಾಲೂಕು ಯೋಜನಾಧಿಕಾರಿ ಸುಭಾಷ್, ಮೇಲ್ವಿಚಾರಕ ರವಿಚಂದ್ರ ಆಚಾರಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಅಶ್ವಿನಿ, ಸಿಬ್ಬಂದಿ ಹುಸೇನ್‌ಬಾಷಾ, ಬಸಮ್ಮ, ಮಂಜುನಾಥ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net