ಮುದಗಲ್: ಪಟ್ಟಣದ ಠಾಣೆಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಪಿಎಸ್‌ಐ ವೆಂಕಟೇಶ ಮಾಡಗೇರಿ ಮತ್ತು ಸಿಬ್ಬಂದಿಯಿಂದ ಗೌರವ ರಕ್ಷೆ ಸ್ವೀಕರಿಸಿದರು.
ನಂತರ ಸಭೆ ನಡೆಸಿ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಿದರು. ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ, ಮಸ್ಕಿ ಸಿಪಿಐ ಜಾಲಗಾರ ಇದ್ದರು.
ಠಾಣೆಗೆ ಸಿಬ್ಬಂದಿ ಕೊರತೆ, ಪಟ್ಟಣದ ಟ್ರಾಫಿಕ್ ಸಮಸ್ಯೆ ಹಾಗೂ ಮರಳು ಅಕ್ರಮ ಸಾಗಣೆ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಮಾಧ್ಯಮದವರು ಗಮನ ಸೆಳೆಯಲು ಯತ್ನಿಸಿದರು. ಆದರೆ, ಎಸ್ಪಿ ಪ್ರತಿಕ್ರಿಯೆ ನೀಡದೆ ತೆರಳಿದರು.