ಕ್ರೀಡೆಗಳಿಂದ ಸದೃಢ ದೇಹ ಸಾಧ್ಯ

ದೇವದುರ್ಗದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಯಲ್ಲಪ್ಪ ಚಾಲನೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಂಗನಾಥ, ಬಾಲಪ್ಪ ಬಾವಿಮನಿ, ಹೊನ್ನಪ್ಪ ಇತರರಿದ್ದರು.
ದೇವದುರ್ಗದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯ ಯಲ್ಲಪ್ಪ ಚಾಲನೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಂಗನಾಥ, ಬಾಲಪ್ಪ ಬಾವಿಮನಿ, ಹೊನ್ನಪ್ಪ ಇತರರಿದ್ದರು.
Published on
ದೇವದುರ್ಗ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡಾಕೂಟದಿಂದ ಸದೃಢ ದೇಹ ಹೊಂದಲು ಸಾಧ್ಯವಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪ್ರಾಚಾರ್ಯ ಯಲ್ಲಪ್ಪ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. 
ಶಾಲಾ ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಆಯೋಜನೆ ಮುಖ್ಯ ಉದ್ದೇಶ ದೈಹಿಕ ಸದೃಢತೆ ಬೆಳೆಸುವುದು. ಇಂದಿನ ಮಕ್ಕಳಿಗೆ ಗ್ರಾಮೀಣ ಕ್ರೀಡೆಗಳ ಬಗ್ಗೆ ಪರಿಚಯವಿಲ್ಲ. ಮೊಬೈಲ್, ಟಿವಿ, ವಿಡಿಯೋ ಗೇಮ್‌ಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ದೈಹಿಕ ಕಸರತ್ತು, ದೇಹ ದಂಡನೆ ಮಾಡುವ ಕ್ರೀಡೆಗೆ ಆದ್ಯತೆ ನೀಡಬೇಕು.ಕಬಡ್ಡಿ, ಖೋಖೋ, ವಾಲಿಬಾಲ್ ಸೇರಿ ಗ್ರಾಮೀಣ ಸೊಗಡಿನ ಕ್ರೀಡೆ ಉಳಿಸಿಬೆಳೆಸಬೇಕಿದೆ ಎಂದರು. 
ಗುಂಪು ಆಟದ ಜತೆಗೆ ಚೆಸ್, ಕೇರಂ, ನೃತ್ಯ, ಲೂಡೋ, ಮ್ಯೂಸಿಕಲ್ ಚೇರ್, ರಂಗೋಲಿ, ಪ್ರಬಂಧ, ಭಾಷಣ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ರಂಗನಾಥ, ಬಾಲಪ್ಪ ಬಾವಿಮನಿ, ಹೊನ್ನಪ್ಪ ಇತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net