ಶ್ರೀ ಸಿದ್ದರಾಮನಂದ ಸ್ವಾಮೀಜಿ ಲಿಂಗೈಕ್ಯ

ಶ್ರೀ ಸಿದ್ದರಾಮನಂದ ಸ್ವಾಮೀಜಿ
ಶ್ರೀ ಸಿದ್ದರಾಮನಂದ ಸ್ವಾಮೀಜಿ
Published on
ಶ್ರೀ ಸಿದ್ದರಾಮನಂದ ಸ್ವಾಮೀಜಿ ಲಿಂಗೈಕ್ಯ
ದೇವದುರ್ಗ (ರಾಯಚೂರು) ತಾಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ (55) ಅವರು ಗುರುವಾರ ಬೆಳಗಿನ ಜಾವ ಹೃದಯಘಾತದಿಂದಾಗಿ ಲಿಂಗೈಕ್ಯರಾಗಿದ್ದಾರೆ.
ಬೆಳಗಿನ ಜಾವ 3-40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಸ್ವಾಮೀಜಿ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ. ತಿಂಥಣಿ ಬ್ರಿಡ್ಜ್ ಕನಕ ಗುರು ಪೀಠದಲ್ಲೇ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಸಲಾಗುವುದು. ಹಾಲುಮತದ ಪದ್ಧತಿಯಂತೆ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ಭಕ್ತರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net