ಅಭಿವೃದ್ಧಿಗೆ ಅನುದಾನ ನೀಡದ ರಾಜ್ಯ ಸರ್ಕಾರ

ಛತ್ತರ ಗ್ರಾಮದಲ್ಲಿ ಕೆಕೆಆರ್‌ಡಿಬಿ ಅನುದಾನದಡಿ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಮಾನಪ್ಪ ವಜ್ಜಲ್ ಭೂಮಿಪೂಜೆ ನೆರವೇರಿಸಿದರು. ಪ್ರಮುಖರಾದ ಕರಿಯಪ್ಪ ಯಾದವ್, ಚಂದಾವಲಿಸಾಬ್ ಮುದಗಲ್, ನಾಗರಾಜ ತಳವಾರ, ಫಕೀರಪ್ಪ ಕುರಿ ಇತರರಿದ್ದರು.
ಛತ್ತರ ಗ್ರಾಮದಲ್ಲಿ ಕೆಕೆಆರ್‌ಡಿಬಿ ಅನುದಾನದಡಿ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಮಾನಪ್ಪ ವಜ್ಜಲ್ ಭೂಮಿಪೂಜೆ ನೆರವೇರಿಸಿದರು. ಪ್ರಮುಖರಾದ ಕರಿಯಪ್ಪ ಯಾದವ್, ಚಂದಾವಲಿಸಾಬ್ ಮುದಗಲ್, ನಾಗರಾಜ ತಳವಾರ, ಫಕೀರಪ್ಪ ಕುರಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಮಾನಪ್ಪ ವಜ್ಜಲ್ ಆರೋಪ
  • ಮುದಗಲ್ ಛತ್ತರ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
ಮುದಗಲ್: ಕೆಕೆಆರ್‌ಡಿಬಿ ಅನುದಾನದಡಿ ಕ್ರಿಯಾಯೋಜನೆ ಸಿದ್ಧಪಡಿಸಿ ಹಂತಹಂತವಾಗಿ ಪ್ರತಿ ಗ್ರಾಮದಲ್ಲಿ ಅಭಿವೃಧ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಮಾನಪ್ಪ ಡಿ.ವಜ್ಜಲ್ ಹೇಳಿದರು.
ಸಮೀಪದ ಛತ್ತರ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಹಣ ನೀಡದೇ ನಿರ್ಲಕ್ಷಿಸುತ್ತಿದ್ದು, ರಾಜ್ಯ ಸರ್ಕಾರದ ಖಜಾನೆ ಬರಿದಾಗಿದೆ ಎಂದು ಆರೋಪಿಸಿದರು.
ಕೆಕೆಆರ್‌ಡಿಬಿ ಅನುದಾನದಲ್ಲಿಯೇ ಕ್ಷೇತ್ರದ ಬಹುತೇಕ ಹಳ್ಳಿಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ, ರಾಜ್ಯ ಸರ್ಕಾರ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸದೆ ಅಧಿಕಾರದ ಹಂಚಿಕೆ ವಿಚಾರವಾಗಿ ಕಾಲಹರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಕೆಆರ್‌ಐಡಿಎಲ್ ಹಿರಿಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿದ್ದರಿಂದ ಗರಂ ಆದ ಶಾಸಕ, ಕಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಾಗಲಾಪುರ, ವ್ಯಾಕರನಾಳ ಹಾಗೂ ಬೆಳ್ಳಿಹಾಳ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು. ಬಿಜೆಪಿ ತಾಲೂಕಾಧ್ಯಕ್ಷ ಕೆ.ನಾಗಭೂಷಣ, ಪ್ರಮುಖರಾದ ಗಿರಿಮಲ್ಲನಗೌಡರು, ಲಿಂಗಣ್ಣ ದೇವಿಕೇರಿ, ವಿಜಯ್ ಇಳಕಲ್, ಭೀಮನಗೌಡರು, ಮೇಘಪ್ಪ ರಾಠೋಡ, ಮಂಜುನಾಥಗೌಡ ಇತರರಿದ್ದರು.
ವ್ಯಾಕರನಾಳ ಗ್ರಾಮಸ್ಥರ ಮನವಿ: ನಾಗಲಾಪುರ ಗ್ರಾಪಂ ವ್ಯಾಪ್ತಿಯ ವ್ಯಾಕರನಾಳ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಿದ್ದು, ಕೂಡಲೇ ಬಗೆಹರಿಸಬೇಕೆಂದು ಶಾಸಕ ಮಾನಪ್ಪ ಡಿ.ವಜ್ಜಲ್‌ಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಕಳೆದ ವರ್ಷ ಗ್ರಾಮದ ಅಂಕಲಿಮಠಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಗೆ ಹೊಂದಿಕೊಂಡು ಕೊರೆಸಲಾದ ಬೋರ್‌ವೆಲ್‌ಗೆ ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ಇದರಿಂದ ಕುಡಿವ ನೀರಿಗೆ ತೊಂದರೆ ಅನುಭವಿಸುವಂತಾಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಕೋರಿದರು. ಶಾಸಕ ಪ್ರತಿಕ್ರಿಯಿಸಿ, ಅಧಿಕಾರಿಗಳಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಪ್ರಮುಖರಾದ ಗಿರಿಮಲ್ಲನಗೌಡ, ನಾಗಭೂಷಣ ಕೆ, ಕರಿಯಪ್ಪ ಯಾದವ್, ನಾಗರಾಜ ತಳವಾರ, ಚಂದಾವಲಿಸಾಬ್ ಮುದಗಲ್, ಲಿಂಗಣ್ಣ ದೇವಿಕೇರಿ , ಫಕೀರಪ್ಪ ಕುರಿ, ಬಾಲಚಂದ್ರ ಕಂದಗಲ್, ನಬೀಸಾಬ್, ಶಂಕ್ರಪ್ಪ ತುರ್ವಿಹಾಳ, ಬಸವರಾಜ ಮಡಿವಾಳ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net