_1787927930898.webp?w=480&auto=format%2Ccompress&fit=max)
_1787927930898.webp?w=480&auto=format%2Ccompress&fit=max)
ರಾಯಚೂರು
ಜಿಲ್ಲಾ ಹಾಕಿ ಅಸೋಸಿಯೇಷನ್‌ನ 25 ನೇ ವಾರ್ಷಿಕೋತ್ಸವ ಅಂಗವಾಗಿ ಆ.29 ರಂದು ನಗರದ ಮಹಾತ್ಮಗಾಂಧಿ ಬಾಸ್ಕೆಟ್ ಬಾಲ್ ಕೋರ್ಟ್‌ನಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ 5ಅರ್ ರಿಂಕ್ ಹಾಕಿ ಟೂರ್ನ್‌ಮೆಂಟ್ ಆಯೋಜಿಸಲಾಗಿದೆಂದು ಜಿಲ್ಲಾ ಹಾಕಿ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಜಲ್ದಾರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ 16 ತಂಡಗಳು ನೊಂದಣಿ ಪಡೆದಿವೆ. ಕಲಬುರಗಿ , ಧಾರವಾಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಹಾಸನ ,ಹುಬ್ಬಳ್ಳಿ, ಗದಗ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ತಂಡಗಳು ಆಗಮಿಸಲಿವೆ.
ಪಂದ್ಯಾವಳಿಯನ್ನು ರಾಜ್ಯ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಮಾಜಿ ಶಾಸಕ ಎ.ಪಾಪಾರೆಡ್ಡಿ, ಎಂಎಲ್ಸಿ ಎ.ವಸಂತಕುಮಾರ, ಮಾಜಿ ಸಂಸದ ಬಿ.ವಿ.ನಾಯಕ, ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ ಆಗಮಿಸಲಿದ್ದಾರೆ. ಅಸೋಸಿಯೇಷನ್ ಕಾರ್ಯದರ್ಶಿ ಹನುಮಂತಪ್ಪ ಸೇರಿ ಅನೇಕರು ಭಾಗಿಯಾಗಲಿದ್ದಾರೆ.
ಸಂಜೆ ಸಮಾರೋಪ ಸಮಾರಂಭ ಹಾಗೂ ಟ್ರೋಫಿ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಎನ್.ಎಸ್.ಬೋಸರಾಜು, ಸಂಸದ ಜಿ.ಕುಮಾರ ನಾಯಕ, ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಮಾಜಿ ಶಾಸಕ ತಿಪ್ಪರಾಜ ಹವಲ್ದಾರ ಸೇರಿ ಅನೇಕರು ಆಗಮಿಸಲಿದ್ದಾರೆ. ಕ್ರೀಡಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಹನುಮಂತಪ್ಪ, ಮುತ್ತುರಾಜ, ಮಂಜುನಾಥಸ್ವಾಮಿ, ರಾಜಶೇಖರ ಪಾಟೀಲ್ ಇದ್ದರು.