ನಗರದ ಮಹಾತ್ಮಾ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಆರು ವರ್ಷಕ್ಕೊಮ್ಮೆ ಕರ್ನಾಟಕಕ್ಕೆ ಒಲಿಯುವ ದಕ್ಷಿಣ ಭಾರತ ಮಟ್ಟದ ಈ ಬೃಹತ್ ಕ್ರೀಡಾಕೂಟವನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಗ್ರಾಮೀಣ ಭಾಗ ಹಾಗೂ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ. ಈ ಕ್ರೀಡಾಕೂಟದಲ್ಲಿ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಆತಿಥೇಯ ಕರ್ನಾಟಕ ಸೇರಿದಂತೆ ಒಟ್ಟು 7 ರಾಜ್ಯಗಳಿಂದ ಸುಮಾರು 250 ರಿಂದ 300 ಪ್ರಮುಖ ಕ್ರೀಡಾಪಟುಗಳು ಸೇರಿದಂತೆ ತರಬೇತುದಾರರು ಮತ್ತು ತಾಂತ್ರಿಕ ತಂಡದ ಸದಸ್ಯರು ಭಾಗವಹಿಸಲಿದ್ದಾರೆ.