ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಿ

ವಟಗಲ್‌ನಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರವನ್ನು ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ರುದ್ರಗೌಡ ಪೊ.ಪಾ. ಉದ್ಘಾಟಿಸಿದರು.
ವಟಗಲ್‌ನಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರವನ್ನು ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ರುದ್ರಗೌಡ ಪೊ.ಪಾ. ಉದ್ಘಾಟಿಸಿದರು.
Published on

ಕವಿತಾಳ: ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ವಟಗಲ್ ಬಸವೇಶ್ವರ ದೇವಸ್ಥಾನ ಸಮಿತಿಯಿಂದ ಆರೋಗ್ಯ ಉಚಿತ ತಪಾಸಣೆ ಆಯೋಜಿಸಿರುವುದು ಶ್ಲಾಘನೀಯ ಎಂದು ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ರುದ್ರಗೌಡ ಪೊ.ಪಾ. ಹೇಳಿದರು.

ವಟಗಲ್ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ದೇವಸ್ಥಾನ ಚಾರಿಟಬಲ್ ಟ್ರಸ್ಟ್‌ದಿಂದ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಸಮಿತಿ ಅಧ್ಯಕ್ಷ ನಟರಾಜ್ ಬಾದಾಮಿ ಮಾತನಾಡಿ, ಆರೋಗ್ಯವೇ ಭಾಗ್ಯವಾಗಿದ್ದು, ಎಲ್ಲರೂ ಆರೋಗ್ಯದಿಂದ ಇರಬೇಕು. ದುಶ್ಚಟಗಳಿಂದ ದೂರ ಇರಬೇಕು ಎಂದು ಸಲಹೆ ನೀಡಿದರು.
ಯದ್ದಲದೊಡ್ಡಿಯ ಶ್ರೀ ಸಿದ್ದಲಿಂಗಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಕಡಬೂರ, ಸಿದ್ದರಾಮಪ್ಪ ಸಾಹುಕಾರ, ಶಂಕರಗೌಡ ಸಾನಬಾಳ, ವೆಂಕನಗೌಡ ಪಾಟೀಲ್, ರಾಮರಡ್ಡಿ, ಗ್ರಾಪಂ ಅಧ್ಯಕ್ಷ ಬಸನಗೌಡ ಬಾಲರಡ್ಡಿ, ಮಂಜುನಾಥಸ್ವಾಮಿ, ವೈದ್ಯರಾದ ಅಂಬಿಕಾ ಎಂ., ಭಾರತಿ, ದೀಪಾ ಕರ್ಲಿ, ಸಂಜೀವರಡ್ಡಿ, ವಿನೋದ, ಶರಣಬಸವ ಮೇಟಿ, ನೀಲಕಂಠ, ವೆಂಕಟೇಶ, ಶ್ವೇತಾ ಉಳ್ಳಳ್ಳಿ, ರಂಗನಾಥ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net