56 ಸಾವಿರ ಹುದ್ದೆಗಳ ಭರ್ತಿಗೆ ಹೋರಾಟ ಸಮಿತಿ ಒತ್ತಾಯ

ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ನೇಮಕಾತಿಗೆ ಕೂಡಲೇ ಅಧಿಸೂಚನೆ ಹೊರಡಿಸಿ ಕೆಪಿಎಸ್ಸಿಯಲ್ಲಿ ಪಾರದರ್ಶಕತೆ ತರಲು ಪಿಸಿ ಹೋಟಾ ಸಮಿತಿ ವರದಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಗುರುವಾರ ರಾಯಚೂರಿನ ಡಿಸಿ ಕಚೇರಿಯ ತಹಸೀಲ್ದಾರ್ ಜಗದೀಶಗೆ ಮನವಿ ಸಲ್ಲಿಸಿದರು.  ರಾಜ್ಯ ಸಹ ಸಂಚಾಲಕ ಚನ್ನಬಸವ ಜಾನೇಕಲ್, ಜಿಲ್ಲಾ ಸಂಘಟನಾಕಾರರಾದ ಶಿವಪ್ಪ , ವಿನೋಸ್ ಕುಮಾರ, ಸಂತೋಷ್ ಸಾಗರ್, ಅಭಿಲಾಶ್, ಶರಣಬಸವ, ರವಿ ಆಲ್ಕೂರ್, ಸುದೀಪ್, ನರಸಪ್ಪ, ಭೀಮರೆಡ್ಡಿ, ಶಿವರಾಜ್, ಉದಯ್ ಕಿರಣ್, ನವೀನ್ ಕುಮಾರ್, ವೆಂಕಟೇಶ್ ಇದ್ದರು.

Published on
ರಾಯಚೂರು 
ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ನೇಮಕಾತಿಗೆ ಕೂಡಲೇ ಅಧಿಸೂಚನೆ ಹೊರಡಿಸಿ ಕೆಪಿಎಸ್ಸಿಯಲ್ಲಿ ಪಾರದರ್ಶಕತೆ ತರಲು ಪಿಸಿ ಹೋಟಾ ಸಮಿತಿ ವರದಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಗುರುವಾರ ನಗರದ ಡಿಸಿ ಕಚೇರಿಯ ತಹಸೀಲ್ದಾರ್ ಜಗದೀಶಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರ ತೀರ್ಮಾನಿಸಿದ ಹುದ್ದೆಗಳ ಭರ್ತಿಗೆ ವಿಳಂಬ ಮಾಡದೆ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಎಲ್ಲಾ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಹಾಗೂ ಪಾರದರ್ಶಕ ನೇಮಕಾತಿ ವ್ಯವಸ್ಥೆ ರೂಪಿಸಲು ಕೆಪಿಎಸ್ಸಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಪಿ.ಸಿ. ಹೋಟಾ ಸಮಿತಿ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು. ಇದಲ್ಲದೆ, ನೇಮಕಾತಿ ಪರೀಕ್ಷೆಗಳ ದುಬಾರಿ ಅರ್ಜಿ ಶುಲ್ಕವನ್ನು ರದ್ದುಪಡಿಸಿ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸಬೇಕು.
 ರಾಜ್ಯದ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಪ್ರತಿವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಸರ್ಕಾರಿ ಉದ್ಯೋಗ ಕಡಿತಕ್ಕೆ ಕಾರಣವಾಗುತ್ತಿರುವ ಎಫ್‌ಆರ್‌ಬಿಎಂ ಕಾಯ್ದೆ-2003 ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಬಜೆಟ್‌ನಲ್ಲಿ ಘೋಷಿಸಿದಂತೆ ಧಾರವಾಡದ ಜಯನಗರ, ಸಪ್ತಾಪುರ, ಶ್ರೀನಗರ ಹಾಗೂ ಕಲ್ಯಾಣನಗರ ಪ್ರದೇಶಗಳಲ್ಲಿ ಕೂಡಲೇ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು. ಧಾರವಾಡ, ಬೆಂಗಳೂರು, ವಿಜಯಪುರ ಸೇರಿದಂತೆ ರಾಜ್ಯದಾದ್ಯಂತ ಉದ್ಯೋಗಾಕಾಂಕ್ಷಿಗಳು ಹೆಚ್ಚಿರುವ ಪ್ರದೇಶಗಳ ಹೋಟೆಲ್, ಖಾನಾವಳಿ ಹಾಗೂ ಉಪಹಾರ ಮಂದಿರಗಳಲ್ಲಿ ಸ್ವಚ್ಛತೆ ಮತ್ತು ಗುಣಮಟ್ಟದ ಆಹಾರ ಒದಗಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆ ನಿಗಾ ವಹಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕ ಚನ್ನಬಸವ ಜಾನೇಕಲ್, ಜಿಲ್ಲಾ ಸಂಘಟನಾಕಾರರಾದ ಶಿವಪ್ಪ , ವಿನೋಸ್ ಕುಮಾರ, ಸಂತೋಷ್ ಸಾಗರ್, ಅಭಿಲಾಶ್, ಶರಣಬಸವ, ರವಿ ಆಲ್ಕೂರ್, ಸುದೀಪ್, ನರಸಪ್ಪ, ಭೀಮರೆಡ್ಡಿ, ಶಿವರಾಜ್, ಉದಯ್ ಕಿರಣ್, ನವೀನ್ ಕುಮಾರ್, ವೆಂಕಟೇಶ್ , ವೆಂಕಟೇಶ್, ವಿನಯ್ ಕುಮಾರ್, ನಾಗರಾಜ್, ನರೇಂದ್ರ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net