ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಿ

ಸಿಂಧನೂರಿನಲ್ಲಿ ಮಾದಕ ದ್ರವ್ಯ ನಿರ್ಮೂಲನಾ ಒಕ್ಕೂಟದಿಂದ ಶಾಸಕ ಹಂಪನಗೌಡ ಬಾದರ್ಲಿಗೆ ಮನವಿ ಸಲ್ಲಿಸಲಾಯಿತು. ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ಪ್ರಮುಖರಾದ ಬಾಬರ್ಪಾಷಾ ವಕೀಲ, ಹುಸೇನ್‌ಸಾಬ್, ಖಾದರ್ಸುಬಾನಿ, ಬಸವರಾಜ ಬಾದರ್ಲಿ, ಜಿಲಾನಿಪಾಷಾ, ಚಿಟ್ಟಿಬಾಬು ಬೂದಿವಾಳಕ್ಯಾಂಪ್ ಇತರರಿದ್ದರು.
ಸಿಂಧನೂರಿನಲ್ಲಿ ಮಾದಕ ದ್ರವ್ಯ ನಿರ್ಮೂಲನಾ ಒಕ್ಕೂಟದಿಂದ ಶಾಸಕ ಹಂಪನಗೌಡ ಬಾದರ್ಲಿಗೆ ಮನವಿ ಸಲ್ಲಿಸಲಾಯಿತು. ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ಪ್ರಮುಖರಾದ ಬಾಬರ್ಪಾಷಾ ವಕೀಲ, ಹುಸೇನ್‌ಸಾಬ್, ಖಾದರ್ಸುಬಾನಿ, ಬಸವರಾಜ ಬಾದರ್ಲಿ, ಜಿಲಾನಿಪಾಷಾ, ಚಿಟ್ಟಿಬಾಬು ಬೂದಿವಾಳಕ್ಯಾಂಪ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾದಕ ವಸ್ತು
  • ಕ್ರಮ ಕೈಗೊಳ್ಳಿ

ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಿ

ಸಿಂಧನೂರು: ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಇದನ್ನು ತಡೆಯಲು ಪೊಲೀಸ್, ಅಬಕಾರಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆದು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಬೇಕೆಂದು ಒತ್ತಾಯಿಸಿ ಮಾದಕ ದ್ರವ್ಯ ನಿರ್ಮೂಲನಾ ಒಕ್ಕೂಟದಿಂದ ಶಾಸಕ ಹಂಪನಗೌಡ ಬಾದರ್ಲಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಗಾಂಜಾ ಹಾಗೂ ಮಾದಕ ವಸ್ತುಗಳ ಹಾವಳಿ ಮಿತಿ ಮೀರುತ್ತಿದೆ. ಕೂಡಲೇ ಎಚ್ಚೆತ್ತು ಕಡಿವಾಣ ಹಾಕದಿದ್ದರೆ ಸಾಮಾಜಿಕ ಹಾನಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ವಿವಿಧ ವಾರ್ಡ್‌ಗಳು, ನಗರಕ್ಕೆ ಹೊಂದಿಕೊಂಡ ನಿರ್ಜನ ಪ್ರದೇಶ ಹಾಗೂ ಇತರೆಡೆ ಗಾಂಜಾ ಪ್ಯಾಕೆಟ್ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಹಾಗೂ ಯುವಜನರನ್ನು ಗುರಿಯಾಗಿಸಿ ವ್ಯವಸ್ಥಿತ ಜಾಲ ಹೆಣೆದು, ಮುಗ್ದರನ್ನು ಬಲಿ ಮಾಡುತ್ತಿದ್ದಾರೆ.
ನಶೆಯಲ್ಲಿ ಯುವಕರು ನಗರದಲ್ಲಿ ಸೈಕಲ್ ಮೋಟರ್‌ಗಳನ್ನು ಮನಬಂದಂತೆ ಚಲಿಸುತ್ತಿದ್ದಾರೆ. ದೊಣ್ಣೆ ಹಿಡಿದು ಸಾರ್ವಜನಿಕರಿಗೆ ಹೆದರಿಸುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಮತ್ತು ತಾಲೂಕು ದಂಡಾಧಿಕಾರಿಗಳ ಸಭೆ ಕರೆದು ಚರ್ಚಿಸಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಜನವರಿ ಮೊದಲ ವಾರದಲ್ಲಿ ಪೊಲೀಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ಪ್ರಮುಖರಾದ ಬಾಬರ್ಪಾಷಾ ವಕೀಲ, ಹುಸೇನಾಸಾಬ್, ಖಾದರ್ಸುಬಾನಿ, ಬಸವರಾಜ ಬಾದರ್ಲಿ, ಜಿಲಾನಿಪಾಷಾ, ಚಿಟ್ಟಿಬಾಬು ಬೂದಿವಾಳಕ್ಯಾಂಪ್, ಶಂಕರ ಗುರಿಕಾರ, ಬಸವಂತರಾಯಗೌಡ ಕಲ್ಲೂರು, ರೆಹಮಾನ್ಸಾಬ್, ಅಬುಲೈಸ್, ಬಸವರಾಜ ಹಳ್ಳಿ, ಸರ್ಪರಾಜ್ ಖಾನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net