ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ

ಮಾನ್ವಿಯಲ್ಲಿ ರೈತ ಫಲಾನುಭವಿಗಳಿಗೆ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಪಂಪ್‌ಸೆಟ್‌ಗಳನ್ನು ವಿತರಿಸಿದರು.
ಮಾನ್ವಿಯಲ್ಲಿ ರೈತ ಫಲಾನುಭವಿಗಳಿಗೆ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಪಂಪ್‌ಸೆಟ್‌ಗಳನ್ನು ವಿತರಿಸಿದರು.
Published on

ಮಾನ್ವಿ: ರಾಜ್ಯ ಸರ್ಕಾರ ವಿವಿಧ ಯೋಜನೆಗಳಡಿ ಬಡ ರೈತರಿಗೆ ನಾನಾ ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಎಂಎಲ್ಸಿ, ಮಾಜಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ರೈತರಿಗೆ ಪಂಪ್‌ಸೆಟ್ ಹಾಗೂ ಅಗತ್ಯ ಸಲಕರಣೆಗಳನ್ನು ವಿತರಿಸಿ ಸೋಮವಾರ ಮಾತನಾಡಿದರು. ಬೆಳೆಗಳಿಗೆ ಕೊಳವೆಬಾವಿಗಳ ಮೂಲಕ ನೀರು ಹರಿಸಲು ಸರ್ಕಾರದಿಂದ ಪಂಪ್‌ಸೆಟ್ ಹಾಗೂ ಅಗತ್ಯ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದರು.

ಕಾಂಗ್ರೆಸ್ ಪ್ರಮುಖರಾದ ಕೆ.ಶಾಂತಪ್ಪ, ಜಯಣ್ಣ, ಮೊಹಮ್ಮದ್ ಶಾಲಂ, ರವಿಪಾಟೀಲ್, ಕುರಬದೊಡ್ಡಿ ಆಂಜನೇಯ, ಮಹದೇವ, ವೀರೇಶ ರಾಜಲಬಂಡಾ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net