ಜೀವಜಲ ಪೂರೈಸಲು ಮುಂಜಾಗ್ರತೆ ಕೈಗೊಳ್ಳಿ

 ಲಿಂಗಸುಗೂರು  ಕುಡಿಯುವ ನೀರು ಪೂರೈಕೆ ಎನ್‌ಆರ್‌ಬಿಸಿ ಕಾಲುವೆ ಪ್ರದೇಶಕ್ಕೆ ಎಂಎಲ್‌ಸಿ ಶರಣಗೌಡ ಪಾಟೀಲ ಭೇಟಿ ನೀಡಿದರು. ಪುರಸಭೆ ಮುಖ್ಯಾಧಿಕಾರಿ ನಟರಾಜ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಪಾಮಯ್ಯ ಮುರಾರಿ, ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ, ಕಾಳಾಪುರ ಗ್ರಾಪಂ ಮಾಜಿ ಅಧ್ಯಕ್ಷ ಅಮರೇಶ ಧಣಿ ಇತರರಿದ್ದರು.
ಲಿಂಗಸುಗೂರು ಕುಡಿಯುವ ನೀರು ಪೂರೈಕೆ ಎನ್‌ಆರ್‌ಬಿಸಿ ಕಾಲುವೆ ಪ್ರದೇಶಕ್ಕೆ ಎಂಎಲ್‌ಸಿ ಶರಣಗೌಡ ಪಾಟೀಲ ಭೇಟಿ ನೀಡಿದರು. ಪುರಸಭೆ ಮುಖ್ಯಾಧಿಕಾರಿ ನಟರಾಜ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಪಾಮಯ್ಯ ಮುರಾರಿ, ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ, ಕಾಳಾಪುರ ಗ್ರಾಪಂ ಮಾಜಿ ಅಧ್ಯಕ್ಷ ಅಮರೇಶ ಧಣಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಂಎಲ್ಸಿ ಶರಣಗೌಡ ಪಾಟೀಲ ಬಯ್ಯಪೂರ ಸೂಚನೆ
  • ಲಿಂಗಸುಗೂರು ಕಾಳಾಪುರ ಕೆರೆ, ಪಂಪ್‌ಹೌಸ್ ಸ್ಥಳಕ್ಕೆ ಭೇಟಿ
ಲಿಂಗಸುಗೂರು: ಪುರಸಭೆ ವ್ಯಾಪ್ತಿಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು. ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಎಂಎಲ್ಸಿ ಶರಣಗೌಡ ಪಾಟೀಲ ಬಯ್ಯಪೂರ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಕಾಳಾಪುರ ಕೆರೆ, ಪಂಪ್‌ಹೌಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾತನಾಡಿದರು. ಕಾಳಾಪುರ ಕೆರೆಯಲ್ಲಿ ಸಂಗ್ರಹವಾಗಿರುವ ನೀರು ಇನ್ನೂ 15ರಿಂದ 20 ದಿನಗಳವರೆಗೆ ಪೂರೈಕೆಯಾಗುತ್ತದೆ. ಇಲ್ಲಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ಕೆರೆಗೆ ನೀರು ಸರಬರಾಜು ಮಾಡಲಾಗಿತ್ತು. ಈಗ ಕಾಲುವೆಗೆ ನೀರು ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಅಭಾವವಾಗದಂತೆ ನೋಡಿಕೊಳ್ಳಬೇಕೆಂದರು.
ಕಾಲುವೆಗೆ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ನಾರಾಯಣಪುರ ಜಲಾಶಯದ ಮುಖ್ಯ ಇಂಜಿನೀಯರ್ ಜಿ.ಜಿ.ಪವಾರ್‌ಗೆ ಮೊಬೈಲ್ ಕರೆ ಮೂಲಕ ಸೂಚಿಸಿದರು. ಪ್ರತಿಕ್ರಿಯಿಸಿದ ಇಂಜಿನೀಯರ್, ನಾರಾಯಣಪುರ ಬಲದಂಡೆ ಕಾಲುವೆ ಕ್ರಸ್ಟ್ ಗೇಟುಗಳ ದುರಸ್ತಿ ಕಾರ್ಯ ನಡೆದಿದೆ. ಇನ್ನೂ 15 ದಿನಗಳಲ್ಲಿ ಕೆಲಸ ಪೂರ್ಣಗೊಳಿಸಿ ಮುಖ್ಯ ಕಾಲುವೆಗೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಪಾಮಯ್ಯ ಮುರಾರಿ, ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ, ಗ್ರಾಪಂ ಮಾಜಿ ಅಧ್ಯಕ್ಷ ಅಮರೇಶ ಧಣಿ, ಪುರಸಭೆ ಮಾಜಿ ಸದಸ್ಯ ಪ್ರಮೋದ ಕುಲಕರ್ಣಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜಗೌಡ ಗಣೇಕಲ್ಲ, ಪುರಸಭೆ ಮಾಜಿ ಅಧ್ಯಕ್ಷ ಅನೀಸ್ ಪಾಶಾ, ಪುರಸಭೆ ಮುಖ್ಯಾಧಿಕಾರಿ ನಟರಾಜ, ಪುರಸಭೆ ಇಂಜಿನೀಯರ್ ಬಸವರಾಜ, ಶಿವಲಿಂಗ ಮೇಗಳಮನಿ, ಪ್ರಮುಖರಾದ ಶರಣಬಸವ ವಾರದ, ಸೋಮಶೇಖರ ಐದನಾಳ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net