ಬಲಗೈ ಜಾತಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಭೀಮಣ್ಣ
ಭೀಮಣ್ಣ
Published on
ರಾಯಚೂರು
2025-26 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಶೇ.70 ಅತಿಹೆಚ್ಚು ಅಂಕ ಪಡೆದ ಬಲಗೈ ಜಾತಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜನೆ ಮಾಡಲಾಗಿದೆಂದು ಜಿಲ್ಲಾ ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಭೀಮಣ್ಣ ಮಂಚಾಲ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆ.23 ರಂದು ನಗರದ ಪಂ.ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಸಮಾಜದ ವಿದ್ಯಾರ್ಥಿಗಳು ಅಂಕ ಪಟ್ಟಿ, ಆಧಾರ ಕಾರ್ಡ,ಜಾತಿ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆಯೊಂದಿಗೆ ಆ.16 ರೊಳಗೆ ಹೆಸರುಗಳನ್ನು ನೊಂದಾಯಿಸಿ ಕೊಳ್ಳಬೇಕು. ಎಲ್ಲಾ ತಾಲೂಕಿನ ವಿದ್ಯಾರ್ಥಿಗಳು, ಪಾಲಕರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಬದಲ್ಲಿ ಗೌರವಾಧ್ಯಕ್ಷ ಎನ್.ಸತ್ಯನಾರಾಯಣ, ಆರ್.ರಾಮಕೃಷ್ಣ, ಎಂ.ಮಾರೆಪ್ಪ, ಶಶಿಧರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net