ತಾಲೂಕು ಮಟ್ಟದ ಕೆಡಿಪಿ ಸಭೆ

ರಾಯಚೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅಧ್ಯಕ್ಷತೆಯಲ್ಲಿ ಶುಕ್ರವಾರ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಾಲೂಕು ಪಂಚಾಯತ್ ಆಡಳಿತಾಧಿಕಾರಿ ವನಿತಾ, ಡಿವೈಎಸ್‌ಪಿ ಈ.ಶಾಂತವೀರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ತಹಶೀಲ್ದಾರ್ ಸುರೇಶ ವರ್ಮಾ ಇದ್ದರು.
ರಾಯಚೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅಧ್ಯಕ್ಷತೆಯಲ್ಲಿ ಶುಕ್ರವಾರ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಾಲೂಕು ಪಂಚಾಯತ್ ಆಡಳಿತಾಧಿಕಾರಿ ವನಿತಾ, ಡಿವೈಎಸ್‌ಪಿ ಈ.ಶಾಂತವೀರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ತಹಶೀಲ್ದಾರ್ ಸುರೇಶ ವರ್ಮಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಕಲಿ ಬೀಜ ಮಾರಾಟ ಮಾಡಿದವರ ಮೇಲೆ ಕ್ರಮವಾಗಲಿ
  • ಶಾಸಕ ಬಸನಗೌಡ ದದ್ದಲ್ ಹೇಳಿಕೆ

ರಾಯಚೂರು ತಾಲೂಕಿನಲ್ಲಿ ನಕಲಿ ಬಿತ್ತನೆ ಬೀಜಗಳ ಮಾರಾಟ ಕಂಡುಬಂದಲ್ಲಿ, ಮಾರಾಟ ಮಾಡಿದ ಅಂಗಡಿಮಾಲೀಕರು ಮತ್ತು ಪೂರೈಸಿದ ಕಂಪನಿವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ಮುಂಗಾರು ಹಂಗಾಮಿನ ಕುರಿತು ರೈತರಿಗೆ, ಬಿತ್ತನೆ ಹಾಗೂ ಇತರೆ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸಬೇಕು. ತಾಲೂಕು ವ್ಯಾಪ್ತಿಯಲ್ಲಿ ಬಹುತೇಕ ಅಂಗಡಿಗಳಲ್ಲಿ ಬಿತ್ತನೆ ಬೀಜ ಕಳೆಪೆ ಮಟ್ಟದಿಂದ ಕೂಡಿರುವುದಾಗಿ ನಕಲಿ ಬಿತ್ತನೆ ಬೀಜ ಮಾರಾಟ ಮಾಡುತ್ತಿರುವುದಾಗಿ ದೂರುಗಳು ಕೇಳಿ ಬರುತ್ತಿದ್ದು, ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತದೆ.

ಬಿತ್ತನೆ ಮಾಡಿದ ನಾಲೈದು ತಿಂಗಳುಗಳವರೆಗೆ ರೈತರಿಗೆ ನಕಲಿ ಬಿತ್ತನೆ ಬೀಜ ಎಂಬುವುದು ತಿಳಿಯುವುದಿಲ್ಲ. ನಕಲಿ ಬಿತ್ತನೆ ಬೀಜ ಹಾಗೂ ಬೇರೆ ರಾಜ್ಯಗಳಿಗೆ ಅಕ್ರಮವಾಗಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆಯೂ ಮಾಹಿತಿಯಿದ್ದು, ಈ ಚಟುವಟಿಕೆಗಳಿಗೆ ಕಾನೂನಿನಲ್ಲಿ ಸಾಕಷ್ಟು ಶಿಕ್ಷೆಗಳು ಮತ್ತು ಕೇಸ್ ದಾಖಲಿಸಲು ಅವಕಾಶವಿದೆ. ಆದರೆ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ಕೇಸ್‌ಗಳ ಕುರಿತು ಭಯ ಇಲ್ಲದಂತಾಗಿದೆ. ಕೂಡಲೇ ಕೇಸ್‌ಗಳನ್ನು ದಾಖಲಿಸಬೇಕು ಮತ್ತು ಅವರ ಮೇಲೆ ಕೈಗೊಳ್ಳುವ ಕ್ರಮಗಳು ಕಠಿಣವಾಗಿರಬೇಕು ಎಂದು ಸೂಚಿಸಿದರು.

ತಾಲೂಕಿನ ಬಹುತೇಕ ಗ್ರಾಮಗಳು ನೆರೆ ರಾಜ್ಯಗಳಿಗೆ ಸಂಪರ್ಕಿಸುವುದರಿಂದ ಇಲ್ಲಿನ ರಸಗೊಬ್ಬರ ಬೇರೆ ರಾಜ್ಯಗಳಿಗೆ ಹೋಗುತ್ತದೆ. ಇದರಿಂದ ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಹೆಚ್ಚುತ್ತದೆ. ಆದ್ದರಿಂದ ಚೆಕ್‌ಪೋಸ್ಟ್ ಗಳಲ್ಲಿ ಸರಿಯಾಗಿ ತಪಾಸಣೆ ನಡೆಸಬೇಕು ಎಂದು ತಿಳಿಸಿದರು.

ಕಲಮಲಾ ಗ್ರಾಮದ ಕುಡಿಯುವ ನೀರಿನ ಕೆರೆ ಉದ್ಘಾಟನೆಯಾಗಿ ಹಲವು ದಿನಗಳಾದರೂ ಕೆರೆಯಿಂದ ಸುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತಿಲ್ಲ. ಜೂ.25ರೊಳಗಾಗಿ ಎಲ್ಲಾ ಕಾರ್ಯಗಳನ್ನು ಮುಗಿಸಿ. ಉದ್ಘಾಟನೆಗೆ ಸಿದ್ದಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಆರ್‌ಎಪಿಎಂಸಿ ಅಧ್ಯಕ್ಷ ಜಯಂತರಾವ್ ಪತಂಗೆ, ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ್ ಕಿಶೋರ ಪಾಟೀಲ್, ನಾಮನಿರ್ದೇಶಿತ ಸದಸ್ಯರಾದ ಈರೇಶ, ತಿಮ್ಮಪ್ಪ ನಾಯಕ, ಜಿಂದಪ್ಪ, ಶರಣಬಸವ, ರಾಯಚೂರು ವಿವಿ ಸಿಂಡಿಕೇಟ್ ಸದಸ್ಯ ಚನ್ನ ಬಸವ, ಎಪಿಎಂಸಿ ಉಪಾಧ್ಯಕ್ಷ ಬಸೀರ್ ಅಹ್ಮದ್, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಾಲೂಕು ಪಂಚಾಯತ್ ಆಡಳಿತಾಧಿಕಾರಿ ವನಿತಾ, ಡಿವೈಎಸ್‌ಪಿ ಈ.ಶಾಂತವೀರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ತಹಶೀಲ್ದಾರ್ ಸುರೇಶ ವರ್ಮಾ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net