ಅಧ್ಯಕ್ಷತೆ ವಹಿಸಿದ್ದ ಡಾ. ಗುರುರಾಜ ದೇಶಪಾಂಡೆ ಮಾತನಾಡಿ, ಪಾಶ್ಚಿಮಾತ್ಯ ಸಂಗತಿಗಳಿಗೆ ಮಾರು ಹೋಗದೆ ಹಿಂದೂ ಧರ್ಮ, ಸಂಸ್ಕೃತಿ ಉಳಿವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದರು. ವೀರಭದ್ರೇಶ್ವರ ದೇವಸ್ಥಾನದ ಅರ್ಚಕ ಸಿದ್ದಯ್ಯಸ್ವಾಮಿ ಸಾಲಿಮಠ ಮಾತನಾಡಿದರು. ಭಾರತೀಯ ಸನಾತನ ಹಿಂದೂ ಧರ್ಮದ ರಕ್ಷಣೆ, ಆರ್‌ಎಸ್‌ಎಸ್ ಸಂಘನೆಯ ಕಾರ್ಯ ಮತ್ತು ಇತಿಹಾಸ ಕುರಿತು ಬಳ್ಳಾರಿಯ ಟಿ.ಪ್ರಸನ್ನ ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಭಾರತಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಿಲ್‌ಕುಮಾರ ಬುಶೆಟ್ಟಿ, ಸಂಗಮೇಶ ಕಾರ್ಯಕ್ರಮ ನಿರ್ವಹಿಸಿದರು.