ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆ ಸಂಸ್ಕಾರವನ್ನೂ ಕಲಿಸಿ

ಸಿಂಧನೂರು ತಾಲೂಕು ಕುರುಕುಂದ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಸರಸ್ವತಿ ಪೂಜೆ ಸಲ್ಲಿಸಲಾಯಿತು. ಮುಖ್ಯಶಿಕ್ಷಕ ಮಲ್ಲಪ್ಪ ಬಿ. ಎಸ್ಡಿಎಂಸಿ ಅಧ್ಯಕ್ಷ ವೆಂಕಪ್ಪ ನಿರೇರ, ಪ್ರಮುಖರಾದ ವಿರುಪಣ್ಣ ಸಾಹುಕಾರ, ಎಸ್ಡಿಎಂಸಿ ಮಾಜಿ ಅಧ್ಯಕ್ಷರಾದ ಬಸವರಾಜ ಪಗಡದಿನ್ನಿ, ಗುಡದಪ್ಪ ನಾಯಕ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಎಸ್ಡಿಎಂಸಿ ಮಾಜಿ ಅಧ್ಯಕ್ಷ ಬಸವರಾಜ ಪಗಡದಿನ್ನಿ ಸಲಹೆ
  • ಕುರುಕುಂದ ಸ್ಕೂಲ್‌ನಲ್ಲಿ ಕಾರ್ಯಕ್ರಮ
ಸಿಂಧನೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯ ಸಹಕಾರ ಅಗತ್ಯವಿದೆ ಎಂದು ಎಸ್ಡಿಎಂಸಿ ಮಾಜಿ ಅಧ್ಯಕ್ಷ ಬಸವರಾಜ ಪಗಡದಿನ್ನಿ ಹೇಳಿದರು.
ತಾಲೂಕಿನ ಕುರುಕುಂದ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಏರ್ಪಡಿಸಿದ್ದ ಸರಸ್ವತಿ ಪೂಜೆ, ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾವುದೇ ಶಾಲೆ ಅಭಿವೃದ್ಧಿ ಹೊಂದಬೇಕಾದರೆ ಕೇವಲ ಸರ್ಕಾರದ ಯೋಜನೆಗಳಿಂದಲ್ಲ. ಗ್ರಾಮಸ್ಥರ ಸಹಕಾರ ಅತ್ಯಗತ್ಯ. ಆ ನಿಟ್ಟಿನಲ್ಲಿ ಗ್ರಾಮದ ಶಾಲೆ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಿದ್ದೇವೆ ಎಂದ ಅವರು, ಮುಖ್ಯಶಿಕ್ಷಕರು, ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರವನ್ನೂ ಕಲಿಸಬೇಕು ಎಂದು ತಿಳಿಸಿದರು.
ಮುಖ್ಯಶಿಕ್ಷಕ ಮಲ್ಲಪ್ಪ ಬಿ. ಮಾತನಾಡಿ, ನಾನು ಕುರುಕುಂದ ಶಾಲೆಗೆ ಇತ್ತೀಚೆಗೆ ವರ್ಗಾವಣೆಯಾಗಿ ಬಂದಿರುವೆ. ಶಾಲೆ ಅಭಿವೃದ್ಧಿಗೆ ಎಸ್ಡಿಎಂಸಿ ಸೇರಿದಂತೆ ಎಲ್ಲರ ಸಹಕಾರ ಸಿಗಲಿದೆಂಬ ವಿಶ್ವಾಸ ಇದೆ. ಮಾದರಿ ಶಾಲೆಯಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವೆ ಎಂದರು.
ಎಸ್ಡಿಎಂಸಿ ಅಧ್ಯಕ್ಷ ವೆಂಕಪ್ಪ ನಿರೇರ, ಪ್ರಮುಖರಾದ ವಿರುಪಣ್ಣ ಸಾಹುಕಾರ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಗುಡದಪ್ಪ ನಾಯಕ, ಗ್ರಾಪಂ ಮಾಜಿ ಸದಸ್ಯ ಗುಡದಪ್ಪ, ಸೋಮಶೇಖರ ಬಸಾಪುರ, ಮೇಟಿ ವೀರೇಶ, ಚಂದ್ರಪ್ಪ ಚನ್ನಳ್ಳಿ, ಮಲ್ಲೇಶ, ಮಹಾಂತೇಶ, ಶಿಕ್ಷಕರಾದ ಮಹಾಲಕ್ಷ್ಮೀ, ಹನುಮಂತಪ್ಪ, ನಾಗಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net