ಸಿಂಧನೂರು ನಗರಸಭೆ ಸಭಾಂಗಣದಲ್ಲಿ ತಾಲೂಕು ಟಾಸ್ಕ್ ಫೋರ್ಸ್ ಸಮಿತಿಯಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕುರಿತು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮುಖ್ಯಶಿಕ್ಷಕರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಲಿಂಗಸುಗೂರು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ ಮಾತನಾಡಿದರು. ತಹಸೀಲ್ದಾರ್ ಅರುಣ್ ದೇಸಾಯಿ, ಬಿಇಒ ಬಸವಲಿಂಗಪ್ಪ, ಅಕ್ಷರ ದಾಸೋಹ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರ್ ಇದ್ದರು.
Teachers should strive for the academic progress of the student
ಎಸ್ಸೆಸ್ಸೆಲ್ಸಿ
ಪರೀಕ್ಷೆ
ಟಾಸ್ಕ್ ಫೋರ್ಸ್ ಸಮಿತಿ
ಸಿಂಧನೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕು ಶೇ.100 ಸಾಧನೆ ಮಾಡಲು, ಕಾರ್ಯ ಯೋಜನೆ ಹಾಕಿಕೊಂಡು ಕಾರ್ಯಗತಗೊಳಿಸಬೇಕು ಎಂದು ಲಿಂಗಸುಗೂರು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ ಹೇಳಿದರು.
ಸ್ಥಳೀಯ ನಗರಸಭೆ ಸಭಾಂಗಣದಲ್ಲಿ ಶನಿವಾರ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯ ಕುರಿತು ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮುಖ್ಯಶಿಕ್ಷಕರೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.
ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯನ್ನು ಎಲ್ಲ ವಿಷಯಗಳ ಶಿಕ್ಷಕರು ನಿರಂತರವಾಗಿ ಗಮನಿಸಿ ಎಲ್ಲರೂ ಉತ್ತೀರ್ಣರಾಗುವಂತೆ ಕಾರ್ಯೋನ್ಮುಖರಾಗಬೇಕು. ಶೇ.50ಕ್ಕಿಂತ ಕಡಿಮೆ ಫಲಿತಾಂಶ ಸಾಧಿಸಿದ ಶಾಲೆಗಳ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ತಹಸೀಲ್ದಾರ್ ಅರುಣ್ ದೇಸಾಯಿ ಮಾತನಾಡಿ, ತಾಲೂಕಿನ ವಸತಿ ಶಾಲೆಗಳು ಕಡ್ಡಾಯವಾಗಿ ಶೇ. ನೂರರಷ್ಟು ಫಲಿತಾಂಶವನ್ನು ಸಾಧಿಸಲೇಬೇಕು. ಇನ್ನುಳಿದ ಶಾಲೆಗಳು ಶೇ.90 ಫಲಿತಾಂಶ ಗಳಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ತಾಲೂಕಿನ ಫಲಿತಾಂಶ ಉತ ್ತಮವಾಗಿದ್ದು ಮುಂದಿನ ವರ್ಷವೂ ವಿಭಾಗದಲ್ಲಿಯೂ ಉತ್ತಮ ಫಲಿತಾಂಶವನ್ನು ನೀಡುವ ಮೂಲಕ ದಾಖಲೆ ನಿರ್ಮಿಸಬೇಕು ಎಂದು ತಿಳಿಸಿದರು.
ಟಾಸ್ಕ್ ಪೋರ್ಸ್ ಸಮಿತಿ ತಾಲೂಕು ಅಧ್ಯಕ್ಷೆ ರೈಲ್ವೆ ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಕೆ.ಶ್ರುತಿ ಮಾತನಾಡಿ, ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ ವಸತಿ ಶಾಲೆಗಳ ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ನಿಲಯ ಪಾಲಕರ ಸಭೆ ಕರೆಯಲಾಗುವುದು ಎಂದರು.
ಮಾದರಿ ಪ್ರಶ್ನೆ
ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ ್ಪ ಮಾತನಾಡಿ, ಈಗಾಗಲೇ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ವಿಷಯವಾರು ಮಾದರಿ ಪ್ರಶ್ನೆ ಪತ್ರಿಕೆಗಳು ಹಾಗೂ ನೀಲ ನಕ್ಷೆ ಬಿಡುಗಡೆಗೊಳಿಸಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜತೆಗೆ ಈ ವರ್ಷ ಬಿಡುಗಡೆಗೊಳಿಸಿರುವ ಪಾಠ ಆಧಾರಿತ ಮೌಲ್ಯಾಂಕನ ಪ್ರಶ್ನೋತ ್ತರಗಳು ಹಾಗೂ ಪ್ರಶ್ನೆ ಕೊಠಡಿಗಳನ್ನು ಬಳಸಿಕೊಳ್ಳಬೇಕು ಎಂದರು.
ಅಕ್ಷರ ದಾಸೋಹ ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರ್, ತಾಲೂಕು ದೈಹಿಕ ಶಿಕ್ಷಣ ವಿಷಯ ಪರೀಕ್ಷಕ ಸೋಮಲಿಂಗಪ್ಪ, ತಾಲೂಕು ನೋಡಲ್ ಅಧಿಕಾರಿ ಅಮರೇಶ ಇದ್ದರು.