ಶಿಶುವಿನಲ್ಲಿ ಹೆಚ್ಚಲಿದೆ ಭದ್ರತೆಯ ಭಾವನೆ

ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಸಿಂಧನೂರು ತಾಲೂಕಿನ ಬೆಳಗುರ್ಕಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ ಉದ್ಘಾಟಿಸಿದರು.
ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಸಿಂಧನೂರು ತಾಲೂಕಿನ ಬೆಳಗುರ್ಕಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ ಉದ್ಘಾಟಿಸಿದರು.
Published on

ಸಿಂಧನೂರು: ತಾಯಿಹಾಲು ಮಮತೆಯ ಪ್ರತೀಕವಾಗಿದ್ದು, ತಾಯಿ ಹಾಗೂ ಶಿಶುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ ಹೇಳಿದರು.

ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಬೆಳಗುರ್ಕಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಶಿಶು ಜನಿಸಿದ ಅರ್ಧ ಗಂಟೆಯೊಳಗೆ ಸ್ತನ್ಯಪಾನ ಆರಂಭಿಸಬೇಕು. ತಾಯಿ ಮತ್ತು ಶಿಶುವನ್ನು ಒಂದೇ ಕಡೆ ಇರಿಸುವುದರಿಂದ ಮಗುವಿನಲ್ಲಿ ಭದ್ರತೆಯ ಭಾವನೆ ಹೆಚ್ಚುವುದರೊಂದಿಗೆ ತಾಯಿಯಲ್ಲಿ ಹಾಲಿನ ಉತ್ಪಾದನೆ ಸುಧಾರಿಸುತ್ತದೆ. ಸ್ತನ್ಯಪಾನದಿಂದ ತಾಯಿಯ ಆರೋಗ್ಯವೂ ಉತ್ತಮಗೊಂಡು, ಹೆರಿಗೆಯ ನಂತರದ ರಕ್ತಸ್ರಾವ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net