ನೌಕರರ ಬಳಗದಿಂದ ಶೈಕ್ಷಣಿಕ ನೆರವು ಶ್ಲಾಘನೀಯ

ದೇವದುರ್ಗ ತಾಲೂಕು ಹಿರೇಬೂದೂರಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಪಾಲಕರನ್ನು ಸನ್ಮಾನಿಸಲಾಯಿತು.
ದೇವದುರ್ಗ ತಾಲೂಕು ಹಿರೇಬೂದೂರಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಪಾಲಕರನ್ನು ಸನ್ಮಾನಿಸಲಾಯಿತು.
Published on

ದೇವದುರ್ಗ: ಹಿರೇಬೂದೂರು ಗ್ರಾಮದ ಸರ್ಕಾರಿ ನೌಕರರು ಗ್ರಾಮದ ಬಳಗ ಕಟ್ಟಿಕೊಂಡು ಗ್ರಾಮದಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಈ ಕಾರ್ಯ ಯುವಕರು, ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಮುಖ್ಯಶಿಕ್ಷಕ ಬಸವರಾಜ ಪಾಟೀಲ್ ಹೇಳಿದರು.

ಹಿರೇಬೂದೂರು ಸರ್ಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ ಮೂಲಕ ಅಕ್ಷರ ಕಲಿಕೆಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು ಎಂದರು.
ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ರೇಖಾಗೆ 10 ಸಾವಿರ ರೂ., ಶಾಹೀನಾಗೆ 7500 ರೂ., ಭರತ್‌ಗೆ ಐದು ಸಾವಿರ ರೂ. ನೀಡಿ ಗೌರವಿಸಲಾಯಿತು. ಸಾಧಕರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಮಸರಕಲ್, ಶಿಕ್ಷಕರಾದ ವೆಂಕಟರೆಡ್ಡಿ, ಖಾಜಾ ಹುಸೇನ್, ಪವನಕುಮಾರ, ಬಸಲಿಂಗಪ್ಪ, ಶರಣಬಸವ, ಗ್ರಾಮಸ್ಥರಾದ ಬಸವರಾಜ ವಕೀಲ, ಗಂಗಾಧರ ನಾಯಕ, ಎಸ್‌ಡಿಎಂಸಿ ಉಪಾಧ್ಯಕ್ಷೆ ನಿರ್ಮಲಾ ಮಾರೆಪ್ಪ, ಸದಸ್ಯರಾದ ಬಸವರಾಜ ಹೊಸಮನಿ, ಮಲ್ಲಯ್ಯ ರಾಮನಾಳ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net