ಶ್ರೀಮಠದಿಂದ ಪ್ರಹ್ಲಾದರಾಜರ ಉತ್ಸವ ಮೂರ್ತಿಯನ್ನು ಭಕ್ತರ ಜಯಘೋಷದ ಮಧ್ಯೆ ಭವ್ಯ ಮೆರವಣಿಗೆಯಲ್ಲಿ ಪರಿಮಳ ತೀರ್ಥದವರೆಗೆ ಕರೆತರಲಾಯಿತು. ನಂತರ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಪ್ರಹ್ಲಾದರಾಜರ ಉತ್ಸವ ಮೂರ್ತಿಗೆ ವಿಶೇಷಪೂಜೆ ನೆರವೇರಿಸಿದರು.
ಬಳಿಕ ಪುಷ್ಕರಣಿಯಲ್ಲಿ ಅಲಂಕೃತಗೊಂಡ ತೆಪ್ಪದಲ್ಲಿ ಪ್ರಹ್ಲಾದರಾಜರ ಮೂರ್ತಿಯನ್ನಿರಿಸಿ ತೆಪ್ಪೋತ್ಸವ ನೆರವೇರಿಸಲಾಯಿತು. ಈ ವೇಳೆ ನೆರೆದಿದ್ದ ಸಹಸ್ರಾರು ಭಕ್ತರು ತೆಪ್ಪೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.